ಪೆರಾಜೆ, ಆ. ೩: ಕುಂಬಳಚೇರಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್.ಡಿ.ಎಂ.ಸಿ. ಸದಸ್ಯರು ಹಾಗೂ ಪೋಷಕರು ಸ್ವಯಂ ಪ್ರೇರಿತರಾಗಿ ಶ್ರಮದಾನ ನಡೆಸಿದರು. ಶಾಲಾ ಆವರಣದಲ್ಲಿ ಬೆಳೆದಿರುವ ಕಳೆ, ಗಿಡಗಂಟಿಗಳನ್ನು ಮತ್ತು ಶಾಲಾ ಕೊಠಡಿಗಳನ್ನು ಶ್ರಮದಾನದ ಮೂಲಕ ಸ್ವಚ್ಛಗೊಳಿಸಿದರು.
ಈ ಕಾರ್ಯದಲ್ಲಿ ಶಾಲಾ ಶಿಕ್ಷಕ ವೃಂದದವರು ಮತ್ತು ಅಡುಗೆ ಸಿಬ್ಬಂದಿ ವರ್ಗದವರು ಭಾಗವಹಿಸಿದರು.