ವೀರಾಜಪೇಟೆ, ಆ. ೩: ನಗರದ ಕಾವೇರಿ ಕಾಲೇಜಿನ ಬಳಿಯಿರುವ ಚರಂಡಿಯಲ್ಲಿ ನವಜಾತ ಗಂಡು ಶಿಶುವಿನ ಮೃತದೇಹ ಪತ್ತೆ ಆಗಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ವೀರಾಜಪೇಟೆ ನಗರ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ವೀರಾಜಪೇಟೆ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.