ಬೆಂಗಳೂರು, ಆ. ೩: ಚೆನ್ನರಾಯಪಟ್ಟಣ - ಹೊಳೆನರಸೀಪುರ - ಅರಕಲಗೂಡು- ಮಡಿಕೇರಿ - ವೀರಾಜಪೇಟೆ - ಮಾಕುಟ್ಟ ಮಾರ್ಗವಾಗಿ ಕರ್ನಾಟಕದಿಂದ ಕೇರಳ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ರಾಷ್ಟಿçÃಯ ಹೆದ್ದಾರಿಯಾಗಿ ಘೋಷಣೆ ಮಾಡಬೇಕಾಗಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರನ್ನು ನವದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.

ಪ್ರಸ್ತುತ ಈ ರಸ್ತೆ ರಾಜ್ಯ ಹೆದ್ದಾರಿಯಾಗಿದ್ದು (Sಊ ೮), ರಾಷ್ಟಿçÃಯ ಹೆದ್ದಾರಿಯಾಗಿ ಮೇಲ್ದರ್ಜೆಗೆ ಏರಿಸಿ ನಾಲ್ಕು ಪಥದ ರಸ್ತೆಗೆ ಅನುಮೋದನೆ ನೀಡುವಂತೆ ಮನವಿ ಸಲ್ಲಿಸಿದರು.

ಈ ರಸ್ತೆಯನ್ನು ಮೇಲ್ದರ್ಜೆಗೆ ಏರಿಸಲು ಶೀಘ್ರದಲ್ಲೇ ಅನುಮೋದನೆ ನೀಡುವುದಾಗಿ ಗಡ್ಕರಿ ಭರವಸೆ ನೀಡಿದರು.

ಈ ರಸ್ತೆಯನ್ನು ರಾಷ್ಟಿçÃಯ ಹೆದ್ದಾರಿಯಾಗಿ ಘೋಷಿಸಿದರೆ ಕೇರಳದ ಕಣ್ಣೂರು ವಿಮಾನ ನಿಲ್ದಾಣಕ್ಕೆ ಕೊಡಗು ಹಾಗೂ ಹಾಸನ ಜಿಲ್ಲೆಗಳಿಂದ ತೆರಳಲು ಸುಲಭವಾಗುತ್ತದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ರಾಷ್ಟಿçÃಯ ಹೆದ್ದಾರಿಯಾಗಿ ಮಾರ್ಪಾಡು ಮಾಡುವ ಸಂಬAಧ ರಾಜ್ಯ ಲೋಕೋಪಯೋಗಿ ಇಲಾಖೆ ಕಾಮಗಾರಿಯ ಯೋಜನೆ ಹಾಗೂ ಅಂದಾಜು ವೆಚ್ಚದ ಮಾಹಿತಿಯನ್ನು ಕೇಂದ್ರದ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯಕ್ಕೆ ೨೦೧೮ ರ ನವೆಂಬರ್‌ನಲ್ಲಿಯೇ ನೀಡಿದ್ದು, ಸಚಿವಾಲಯ ಯೋಜನೆ ಪ್ರಾರಂಭಕ್ಕೆ ಅನುಮೋದನೆ ನೀಡಬೇಕಿದೆ. ಆದಷ್ಟು ಬೇಗನೆ ಇದಕ್ಕೆ ಅನುಮೋದಿಸಬೇಕು ಎಂದು ದೇವೇಗೌಡ ಅವರು ಒತ್ತಾಯಿಸಿದ್ದಾರೆ.

ಮನವಿ ಸಲ್ಲಿಸುವ ಸಂದರ್ಭ ಸಂಸದ ಪ್ರಜ್ವಲ್ ರೇವಣ್ಣ, ಶಾಸಕರುಗಳಾದ ಹೆಚ್.ಡಿ. ರೇವಣ್ಣ, ಪುಟ್ಟರಾಜು, ವಿಧಾನ ಪರಿಷತ್ ಸದಸ್ಯ ರಮೇಶ್ ಗೌಡ ಇದ್ದರು.