ಪೊನ್ನಂಪೇಟೆ, ಆ. ೩: ಪೊನ್ನಂಪೇಟೆ ಸಮೀಪದ ಮತ್ತೂರು ಗ್ರಾಮದ ಕಾಕೇರ ಪೂವಯ್ಯ ಎಂಬವರ ಮನೆಗೆ ಕನ್ನ ಹಾಕಿರುವ ಕಳ್ಳರು ಮನೆಯ ಬೀರು ಹೊಡೆದು ಚಿನ್ನಾಭರಣ ಹಾಗೂ ನಗದನ್ನು ದೋಚಿದ್ದಾರೆ.
ಪೂವಯ್ಯ ದಂಪತಿ ಇಂದು ಮಧ್ಯಾಹ್ನ ಅಕ್ಕಿ ತರಲೆಂದು ಪೊನ್ನಂಪೇಟೆಯ ಸೊಸೈಟಿಗೆ ತೆರಳಿದ್ದ ಸಂದÀರ್ಭ ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಖಚಿತಪಡಿಸಿಕೊಂಡ ಕಳ್ಳರು ಮನೆಯ ಬಾಗಿಲಿನ ಬೀಗ ಒಡೆದು ಮನೆಗೆ ನುಗ್ಗಿ ಬೀರುವಿನಲ್ಲಿದ್ದ ಒಂದು ಚಿನ್ನದ ಪತ್ತಾಕ್, ಎರಡು ಚಿನ್ನದ ನಾಣ್ಯ ಹಾಗೂ ರೂ. ೨೫ ಸಾವಿರ ನಗದನ್ನು ದೋಚಿ ಪರಾರಿಯಾಗಿದ್ದಾರೆ.
ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಗೋಣಿಕೊಪ್ಪ ವೃತ್ತ ನಿರೀಕ್ಷಕ ಜಯರಾಮ್, ಪೊನ್ನಂಪೇಟೆ ಠಾಣಾಧಿಕಾರಿ ಡಿ. ಕುಮಾರ್, ಸಿಬ್ಬಂದಿ ಪ್ರಮೋದ್, ಮನು, ಮಹೇಶ್ ಹಾಗೂ ಬಶೀರ್ ಭೇಟಿ ನೀಡಿ ಪರಿಶೀಲಿಸಿದ್ದು, ಕಳ್ಳರ ಪತ್ತೆಗಾಗಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.