ಮಡಿಕೇರಿ, ಆ. ೩: ಸ್ವಾತಂತ್ರö್ಯ ದಿನಾಚರಣೆ ಪ್ರಯುಕ್ತ ೨೦೨೧ ರ ಆಗಸ್ಟ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.೫೦ ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಲು ಕೋರಿದೆ.
ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಆನ್ಲೈನ್ ತಿತಿತಿ.ಞಚಿಟಿಟಿಚಿಜಚಿಠಿusಣಚಿಞಚಿಠಿಡಿಚಿಜhiಞಚಿಡಿಚಿ.ಛಿom (ನಮ್ಮ ಪುಸ್ತಕಗಳ ವಿಭಾಗ ಆಯ್ಕೆ ಮಾಡಿ ಆನ್ಲೈನ್ ಮೂಲಕ ಹಣ ಪಾವತಿಸಿ ಪುಸ್ತಕಗಳನ್ನು ಅಂಚೆ ಮೂಲಕ ಪಡೆಯಬುದಾಗಿದೆ) ಶೇ.೫೦ ರಿಯಾಯಿತಿ ಲಭ್ಯವಿದೆ.
ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬAಧಿಸಿದAತೆ ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ ವೈದ್ಯಕೀಯ ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹತ್ತು ಹಲವು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಸುಮಾರು ೪೪೬ ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಅತ್ಯಂತ ಮೌಲಿಕವಾದ ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸುವುದು ಉದ್ದೇಶವಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ತಿಳಿಸಿದ್ದಾರೆ.