ಮಡಿಕೇರಿ, ಆ. ೪: ರಾಜ್ಯದಲ್ಲಿ ಕೋವಿಡ್ ನಿರ್ವಹಣೆ ಹಾಗೂ ನೆರೆ ಹಾವಳಿ ಪರಿಹಾರ ಕೆಲಸಗಳನ್ನು ತ್ವರಿತವಾಗಿ ಪರಿಶೀಲನೆ ಮಾಡಲು ನೂತನವಾಗಿ ನೇಮಕಗೊಂಡಿರುವ ಸಚಿವರುಗಳನ್ನು ಉಸ್ತುವಾರಿಗಳನ್ನಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ನೇಮಕ ಮಾಡಿದ್ದಾರೆ. ಕೊಡಗು ಜಿಲ್ಲೆಗೆ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ನೇಮಕ ಮಾಡಿ ಮುಖ್ಯಮಂತ್ರಿಗಳು ಆದೇಶ ಹೊರಡಿಸಿದ್ದಾರೆ.