ಮಡಿಕೇರಿ, ಆ. ೪: ಕೇರಳ ಮತ್ತು ಮಹಾರಾಷ್ಟç ರಾಜ್ಯಗಳಲ್ಲಿ ಕೋವಿಡ್-೧೯ ಸೋಂಕು ಹೆಚ್ಚುತ್ತಿದ್ದು, ಈ ಜಿಲ್ಲೆಯಲ್ಲಿ ಕೋವಿಡ್-೧೯ ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಿಶೇಷ ಸರ್ವೇಕ್ಷಣಾ ಮಾನದಂಡಗಳನ್ನು ಕೊಡಗು ಜಿಲ್ಲೆಯಾದ್ಯಂತ ತಾ. ೫ ರಿಂದ (ಇಂದಿನಿAದ) ೧೬ರ ಬೆಳಿಗ್ಗೆ ೬ ಗಂಟೆಯವರೆಗೆ ಜಾರಿಯಲ್ಲಿರುವಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ಕೋವಿಡ್-೧೯ ನಿಯಂತ್ರಿಸುವ ಸಂಬAಧ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೊರಡಿಸಿರುವ ಎಲ್ಲಾ ಮಾರ್ಗಸೂಚಿಗಳು ಮುಂಜಾಗ್ರತಾ ಕ್ರಮಗಳಾದ ಮಾಸ್ಕ್ ಧರಿಸುವಿಕೆ, ಸಾಮಾಜಿಕ

(ಮೊದಲ ಪುಟದಿಂದ) ಅಂತರ ಕಾಯ್ದುಕೊಳ್ಳುವುದು, ಮತ್ತು ಸ್ಯಾನಿಟೈಸರ್ ಬಳಕೆಯನ್ನು ಕಡ್ಡಾಯಗೊಳಿಸಿದೆ. ಅಂತರ ರಾಜ್ಯಗಳಿಂದ ಕೊಡಗು ಜಿಲ್ಲೆಗೆ ಬಸ್ ಅಥವಾ ವೈಯಕ್ತಿಕ ಸಾರಿಗೆ ಮೂಲಕ ಪ್ರವೇಶ ಪಡೆಯುವವರಿಗೆ ಕೋವಿಡ್ ೨ನೇ ಡೋಸ್ ಲಸಿಕೆಯನ್ನು ಪಡೆದಿದ್ದರೂ, ಸಹ ೭೨ ಗಂಟೆಗಳ ಒಳಗೆ ಮಾಡಿಸಿದ ಆರ್‌ಟಿಪಿಸಿಆರ್ ಪರೀಕ್ಷಾ ನೆಗೆಟಿವ್ ಪ್ರಮಾಣ ಪತ್ರವನ್ನು ಹೊಂದಿರುವುದನ್ನು ಕಡ್ಡಾಯಗೊಳಿಸಲಾಗಿದೆ.

ಜಿಲ್ಲಾ ವ್ಯಾಪ್ತಿಯಲ್ಲಿನ ಎಲ್ಲಾ ಹೊಟೇಲ್, ಲಾಡ್ಜ್, ರೆಸಾರ್ಟ್, ಹೋಂಸ್ಟೇ, ಅರಣ್ಯ ಇಲಾಖೆಗಳ ವಸತಿ ಗೃಹ ಇತ್ಯಾದಿಗಳಲ್ಲಿ ತಂಗಲಿರುವವರು ಬುಕಿಂಗ್ ಸಮಯದಲ್ಲಿ ಪ್ರವಾಸಿಗಳು ಚೆಕ್‌ಇನ್ ದಿನದಿಂದ ಹಿಂದಿನ ೭೨ ಗಂಟೆಗಳೊಳಗಾಗಿ ಮಾಡಿಸಿದ ಆರ್‌ಟಿಪಿಸಿಆರ್ ನೆಗೆಟಿವ್ ಪರೀಕ್ಷಾ ಪ್ರಮಾಣ ಪತ್ರವನ್ನು ಹಾಜರುಪಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ.

ಜಿಲ್ಲೆಯ ಪ್ರಮುಖ ಪ್ರವಾಸಿ ತಾಣಗಳು ಹಾಗೂ ಇನ್ನಿತರ ಪ್ರೇಕ್ಷಣೀಯ ಸ್ಥಳಗಳಾದ ರಾಜಾಸೀಟ್, ಅಬ್ಬಿಫಾಲ್ಸ್, ಮಾಂದಲ್‌ಪಟ್ಟಿ, ದುಬಾರೆ, ನಿಸರ್ಗಧಾಮ, ಹಾರಂಗಿ ಡ್ಯಾಂ, ಚಿಕ್ಲಿಹೊಳೆ ಡ್ಯಾಂ, ಮಲ್ಲಳ್ಳಿ ಫಾಲ್ಸ್, ಇರ್ಪುಫಾಲ್ಸ್, ಚೇಲಾವರ ಫಾಲ್ಸ್ ಇತ್ಯಾದಿಗಳು ಮತ್ತು ಪ್ರವಾಸೋದ್ಯಮ, ಅರಣ್ಯ ಇಲಾಖೆ, ಪ್ರಾಚ್ಯ ವಸ್ತು, ಪುರಾತತ್ವ ಇಲಾಖೆಗಳ ಪ್ರವಾಸಿ ತಾಣಗಳು ಮತ್ತು ಇನ್ನಿತರ ಪ್ರೇಕ್ಷಣೀಯ ಸ್ಥಳಗಳಿಗೆ ಆಗಮಿಸುವ ಪ್ರವಾಸಿಗಳು ಹಾಗೂ ಸಾರ್ವಜನಿಕರಿಗೆ ಹಿಂದಿನ ೭೨ ಗಂಟೆಗಳೊಳಗಾಗಿ ಮಾಡಿಸಿದ ಆರ್‌ಟಿಪಿಸಿಆರ್ ನೆಗೆಟಿವ್ ಪರೀಕ್ಷಾ ಪ್ರಮಾಣ ಪತ್ರವನ್ನು ಕಡ್ಡಾಯಗೊಳಿಸಲಾಗಿದೆ. ಈ ಬಗ್ಗೆ ಸಂಬAಧಪಟ್ಟ ಇಲಾಖೆಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಕೋವಿಡ್-೧೯ ನಿರ್ವಹಣೆಯ ಮುಂಜಾಗ್ರತಾ ಕ್ರಮಗಳನ್ನು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮತ್ತು ಈ ಕಚೇರಿಯಿಂದ ನೀಡುವ ಎಲ್ಲಾ ನಿರ್ದೇಶನಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಯನ್ನು ವಿಪತ್ತು ನಿರ್ವಹಣಾ ಕಾಯ್ದೆ ಕಲಂ ೫೧ ರಿಂದ ೬೦ರ ಉಪಬಂಧಗಳು ಮತ್ತು ಭಾರತೀಯ ದಂಡಸAಹಿತೆ ಕಲಂ ೧೮೮ ಹಾಗೂ ದಿ ಕರ್ನಾಟಕ ಎಪಿಡೆಮಿಕ್ ಡಿಸೀಸಸ್ ಆಕ್ಟ್-೨೦೨೦ರ ಕಲಂ ೯ರ ಅಡಿಯಲ್ಲಿನ ಕಾನೂನು ಕ್ರಮಗಳು ಮತ್ತು ಕಾಲಕಾಲಕ್ಕೆ ಅನ್ವಯವಾಗಬಹುದಾದ ಇತರ ಕಾನೂನು ಉಪಬಂಧಗಳ ಮೇರೆಗೆ ದಂಡನೆಗೆ ಒಳಗಾಗಲಿದ್ದಾರೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.