ಮಡಿಕೇರಿ, ಆ. ೪: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ “ದೃಶ್ಯ ಮಾಧ್ಯಮದಲ್ಲಿ ಅರೆಭಾಷೆ” ಬಗ್ಗೆ ಮೂರು ದಿವಸಗಳ ಕಾರ್ಯಾಗಾರ ಹಮ್ಮಿಕೊಳ್ಳಲು ನಿರ್ಧರಿಸಿದ್ದು, ಆಸಕ್ತರು ಅಕಾಡೆಮಿ ಕಚೇರಿ ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಬಹುದು.

ಸೀಮಿತ ಸದಸ್ಯರಿಗೆ ಮಾತ್ರ ಅವಕಾಶ ಇರುವುದರಿಂದ ತಮ್ಮ ಅನುಭವದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು. ಕಾರ್ಯಾಗಾರದಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಗುವುದು. ಹೆಸರು ನೋಂದಾಯಿಸಿಕೊಳ್ಳಲು ತಾ. ೧೬ ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ರಿಜಿಸ್ಟಾçರ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಕಾಫಿ ಕೃಪಾ, ರಾಜಸೀಟ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ. ಮೊ.ನಂ. ೬೩೬೨೫೨೨೬೭೭, ಚಿಡಿebಚಿseಚಿಛಿಚಿಜemಥಿ@gmಚಿiಟ.ಛಿom ನ್ನು ಸಂಪರ್ಕಿಸಬಹುದು ಎಂದು ರಿಜಿಸ್ಟಾçರ್ ತಿಳಿಸಿದ್ದಾರೆ.