ಮಡಿಕೇರಿ, ಆ. ೪: ಬಿಜೆಪಿ ಯುವ ಮೋರ್ಚಾದ ಕಾರ್ಯಕಾರಣಿ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ದರ್ಶನ್ ಜೋಯಪ್ಪ ವಹಿಸಿದ್ದರು. ಸಭೆಗೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಿಧಾನ ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಮಾತನಾಡಿ, ಕೋವಿಡ್ ಸೊಂಕಿನಿAದ ಮೃತಪಟ್ಟ ಎಷ್ಟೋ ಜನರ ಸಂಸ್ಕಾರವನ್ನು ನೆರವೇರಿಸಿ, ಮಾನವೀಯತೆ ಮೆರೆದ ಜಿಲ್ಲಾ ಯುವ ಮೋರ್ಚಾವನ್ನು ಅಭಿನಂದಿಸಿದರು. ಪಕ್ಷಕ್ಕಾಗಿ ಹಿರಿಯರು ನೀಡಿದ ಕೊಡುಗೆ, ಜಿಲ್ಲೆಯಲ್ಲಿ ಬಿಜೆಪಿ ಬೆಳೆದು ಬಂದ ದಿನಗಳನ್ನು ಮೆಲುಕು ಹಾಕಿದರು. ದರ್ಶನ್ ಜೋಯಪ್ಪ ಮಾತನಾಡಿ, ಕಳೆದ ಒಂದು ವರ್ಷದಿಂದ ನಡೆಸಿದ ಕಾರ್ಯಕ್ರಮಗಳ ಕುರಿತು ವಿವರಿಸಿದರಲ್ಲದೆ, ಮುಂದಿನ ದಿನಗಳಲ್ಲಿ ಇನ್ನೂ ವಿನೂತನ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದೆಂದರು.

ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷರಾದ ಜಯಶಂಕರ್ ಅವರು, ಒಬ್ಬ ಸಾಮಾನ್ಯ ಕಾರ್ಯಕರ್ತ ಪಕ್ಷಕ್ಕಾಗಿ ಶ್ರಮವಹಿಸಿ ದುಡಿದರೆ, ಅವನಿಗೆ ಉತ್ತಮ ಸ್ಥಾನ ನೀಡುವ ಮುಕ್ತ ವಾತಾವರಣ ಭಾರತೀಯ ಜನತಾ ಪಾರ್ಟಿಯಲ್ಲಿ ಮಾತ್ರವೇ ಇದೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಮಾತನಾಡಿ, ಪಕ್ಷದಲ್ಲಿ ಪ್ರತಿ ಕಾರ್ಯಕರ್ತನೂ ಪಡುವ ಶ್ರಮವನ್ನು ಪಕ್ಷ ಗಮನದಲ್ಲಿಡುತ್ತದೆ. ತಳ ಮಟ್ಟದಿಂದ ಬೆಳೆಯುತ್ತಾ, ವ್ಯಕ್ತಿ ನಿಷ್ಠೆ, ಪಕ್ಷ ನಿಷ್ಠೆ, ದೇಶ ನಿಷ್ಠೆಯನ್ನು ಕಾಪಾಡಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾದಪ್ಪ, ರವಿ ಕಾಳಪ್ಪ, ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾರಿಗಳಾದ ಭಾರತೀಶ್, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಪ್ರಸಾದ್ ಚೆಂಗಪ್ಪ, ಯಶ್ವಿನ್ ಉಪಸ್ಥಿತರಿದ್ದರು. ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪದಾಧಿಕಾರಿಗಳು, ತಾಲೂಕು ಅಧ್ಯಕ್ಷರು, ಪದಾಧಿಕಾರಿಗಳು ಕಾರ್ಯಕಾರಿಣಿ ಸಭೆಯಲ್ಲಿ ಹಾಜರಿದ್ದರು.