
ಬೆಂಗಳೂರು, ಆ. ೪: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಚಿವ ಸಂಪುಟ ರಚನೆಯಾಗಿದ್ದು, ಮೊದಲಿಗೆ ೨೯ ಸಚಿವರು ಪ್ರಮಾಣ ವಚನ ಸ್ವೀಕರಿಸಿದರು.
ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆದಿದ್ದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.
ಕೆ.ಎಸ್.ಈಶ್ವರಪ್ಪ-ಶಿವಮೊಗ್ಗ, ಆರ್. ಅಶೋಕ್- ಪದ್ಮನಾಭ ನಗರ, ಡಾ. ಸಿ.ಎನ್.ಅಶ್ವತ್ಥ ನಾರಾಯಣ - ಮಲ್ಲೇಶ್ವರ, ಉಮೇಶ್ ಕತ್ತಿ- ಹುಕ್ಕೇರಿ, ಎಸ್.ಟಿ.ಸೋಮಶೇಖರ್- ಯಶವಂತಪುರ, ಡಾ.ಕೆ.ಸುಧಾಕರ್ - ಚಿಕ್ಕಬಳ್ಳಾಪುರ, ಬೈರತಿ ಬಸವರಾಜ - ಕೆಆರ್ಪುರಂ, ಮುರುಗೇಶ್ ನಿರಾಣಿ - ಬಿಳಿಗಿ,
(ಮೊದಲ ಪುಟದಿಂದ) ಶಿವರಾಂ ಹೆಬ್ಬಾರ್- ಯಲ್ಲಾಪುರ, ಶಶಿಕಲಾ ಜೊಲ್ಲೆ- ನಿಪ್ಪಾಣಿ, ಕೆ.ಸಿ. ನಾರಾಯಣ್ ಗೌಡ - ಕೆಆರ್ಪೇಟೆ, ಸುನೀಲ್ ಕುಮಾರ್ - ಕಾರ್ಕಳ, ಅರಗ ಜ್ಞಾನೇಂದ್ರ - ತೀರ್ಥಹಳ್ಳಿ, ಗೋವಿಂದ ಕಾರಜೋಳ-ಮುಧೋಳ, ಮುನಿರತ್ನ- ಆರ್ಆರ್ ನಗರ, ಎಂ.ಟಿ.ಬಿ ನಾಗರಾಜ್ - ಎಂಎಲ್ಸಿ, ಗೋಪಾಲಯ್ಯ-ಮಹಾಲಕ್ಷಿö್ಮ ಲೇಔಟ್, ಮಾಧುಸ್ವಾಮಿ- ಚಿಕ್ಕನಾಯಕನಹಳ್ಳಿ, ಹಾಲಪ್ಪ ಆಚಾರ್ - ಯಲ್ಬುರ್ಗ, ಶಂಕರ್ ಪಾಟೀಲ್ ಮುನೇನಕೊಪ್ಪ - ನವಲುಗುಂದ, ಕೋಟಾ ಶ್ರೀನಿವಾಸ ಪೂಜಾರಿ - ಎಂಎಲ್ಸಿ, ಪ್ರಭು ಚೌವ್ಹಾಣ್ - ಔರಾದ್, ವಿ. ಸೋಮಣ್ಣ - ಗೋವಿಂದರಾಜನಗರ, ಎಸ್ ಅಂಗಾರ-ಸುಳ್ಯ, ಆನಂದ್ ಸಿಂಗ್ - ಹೊಸಪೇಟೆ, ಸಿ.ಸಿ. ಪಾಟೀಲ್ - ನರಗುಂದ, ಬಿ.ಸಿ. ನಾಗೇಶ್ - ತಿಪಟೂರು ಮತ್ತು ಬಿ. ಶ್ರೀರಾಮುಲು- ಮೊಳಕಾಲ್ಮೂರು, ಬಿ.ಸಿ. ಪಾಟೀಲ್- ಹಿರೇಕೆರೂರು ಕ್ಷೇತ್ರದವರಾಗಿದ್ದು ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಮಾಜಿ ಮಂತ್ರಿಗಳಾದವರು : ಜಗದೀಶ್ ಶೆಟ್ಟರ್, ಸುರೇಶ್ಕುಮಾರ್, ಅರವಿಂದ ಲಿಂಬಾವಳಿ, ಲಕ್ಷö್ಮಣ ಸವದಿ, ಸಿ.ಪಿ. ಯೋಗೇಶ್ವರ್, ಶಂಕರ್, ಶ್ರೀಮಂತ್ ಪಾಟೀಲ್ರನ್ನು ಸಂಪುಟದಿAದ ಕೈಬಿಡಲಾಗಿದೆ. ೧೩ ಜಿಲ್ಲೆಗಳಿಗೆ ಪ್ರಾತಿನಿಧ್ಯವಿಲ್ಲ - ಮೈಸೂರು, ಕಲ್ಬುರ್ಗಿ, ರಾಮನಗರ, ಕೊಡಗು, ರಾಯಚೂರು, ಹಾಸನ, ವಿಜಯಪುರ, ಬಳ್ಳಾರಿ, ದಾವಣಗೆರೆ, ಕೋಲಾರ, ಯಾದಗಿರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಈ ಬಾರಿ ಮಂತ್ರಿ ಮಂಡಲದಲ್ಲಿ ಪ್ರಾತಿನಿಧ್ಯ ಸಿಕ್ಕಿಲ್ಲ. ಬೆಂಗಳೂರು ನಗರಕ್ಕೆ ೭ ಸಚಿವ ಭಾಗ್ಯ ಸಿಕ್ಕಿದೆ.