ಮಡಿಕೇರಿ, ಆ. ೪: ಬೆಂಗಳೂರಿನ ಶ್ರೀಜ್ಞಾನಮಂದಾರ ಶೈಕ್ಷಣಿಕ ಮತ್ತು ಸಾಂಸ್ಕöÈತಿಕ ಅಕಾಡೆಮಿ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ನೀಡುವ ಸಮಾಜರತ್ನ ಪ್ರಶಸ್ತಿಗೆ ಮಡಿಕೇರಿಯ ಅಂಬೆಕಲ್ಲು ಕುಶಾಲಪ್ಪ ಭಾಜನರಾಗಿದ್ದಾರೆ.

ಪ್ರಸ್ತುತ ಕೊಡಗು ಜಿಲ್ಲಾ ಸರ್ವೋದಯ ಸಮಿತಿಯ ಅಧ್ಯಕ್ಷರಾಗಿರುವ ಕುಶಾಲಪ್ಪ ಅವರು ಈ ಹಿಂದೆ ಕೊಡಗು ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ, ನಗರಸಭಾ ಸದಸ್ಯರಾಗಿ, ಚೇಂಬರ್ ಆಫ್ ಕಾಮರ್ಸ್ ಉಪಾಧ್ಯಕ್ಷರಾಗಿ, ಶಿಶು ಕಲ್ಯಾಣ ಸಂಸ್ಥೆಯ ಸದಸ್ಯರಾಗಿ ಹಾಗೂ ಇನ್ನೂ ಅನೇಕ ಸೇವಾ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಇವರ ಸಮಾಜಮುಖಿ ಕಾರ್ಯವನ್ನು ಗುರುತಿಸಿ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಕೊರೊನಾ ನಿಯಂತ್ರಣದ ನಂತರ ಸರ್ಕಾರದ ಮಾರ್ಗಸೂಚಿಯಂತೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗುವುದು. ಧಾರವಾಡದ ಪಾಟೀಲಪುಟ್ಟಪ್ಪ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಲಾಗುವುದು ಎಂದು ಟ್ರಸ್ಟ್ನ ಸಂಸ್ಥಾಪಕ ಸೋಮಶೇಖರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.