ಮಡಿಕೇರಿ, ಆ. ೪: ಕೊಡಗು ಕಾಂಗ್ರೆಸ್‌ನ ಎಲ್ಲಾ ಘಟಕಗಳು ಒಗ್ಗೂಡಿ ಕಾರ್ಯನಿರ್ವಹಿಸುವ ಮೂಲಕ ಪಕ್ಷ ಸಂಘಟನೆಗೆ ಆದ್ಯತೆ ನೀಡಬೇಕೆಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ಘಟಕದ ಜಿಲ್ಲಾಧ್ಯಕ್ಷ ವಿ.ಕೆ. ಸತೀಶ್ ಕುಮಾರ್ ಕರೆ ನೀಡಿದ್ದಾರೆ.

ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಜಿಲ್ಲಾ ಮತ್ತು ಬ್ಲಾಕ್ ಸಮಿತಿಯ ಪದಾಧಿಕಾರಿಗಳ ಸಭೆ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಸತೀಶ್ ಕುಮಾರ್ ಪರಿಶಿಷ್ಟ ಜಾತಿ ಘಟಕದ ಬಲವರ್ಧನೆಗೆ ಎಲ್ಲರೂ ಶ್ರಮಿಸಬೇಕು. ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಮೂಲಕ ಪಕ್ಷವನ್ನು ಜನರ ಬಳಿಗೆ ಕೊಂಡೊಯ್ಯಬೇಕೆAದು ಹೇಳಿದರು. ಪರಿಶಿಷ್ಟ ಜಾತಿ ಘಟಕ ನೀಡಿದ ಸನ್ಮಾನ ಸ್ವೀಕರಿಸಿ ಮಾತನಾಡಿದ ಜಿಲ್ಲಾ ಕಾರ್ಯಾಧ್ಯಕ್ಷ ಧರ್ಮಜ ಉತ್ತಪ್ಪ, ಕೊಡಗನ್ನು ಮತ್ತೊಮ್ಮೆ ಕಾಂಗ್ರೆಸ್ ಭದ್ರ ಕೋಟೆಯನ್ನಾಗಿ ಮಾಡಲು ಎಲ್ಲರೂ ಕೈಜೋಡಿಸಬೇಕೆಂದು ಮನವಿ ಮಾಡಿದರು.

ಎಸ್ಸಿ ಘಟಕದ ಜಿಲ್ಲಾ ಉಪಾಧ್ಯಕ್ಷರುಗಳಾದ ಜನಾರ್ಧನ್, ಬೇಲಯ್ಯ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಪಿ. ಸುರೇಶ್, ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಎಂ. ನಂದಕುಮಾರ್, ನಾಪೋಕ್ಲು ಬ್ಲಾಕ್ ಎಸ್ಸಿ ಘಟಕದ ಅಧ್ಯಕ್ಷ ಪೊನ್ನಪ್ಪ, ಮಡಿಕೇರಿ ನಗರ ಘಟಕದ ಅಧ್ಯಕ್ಷ ಮುದ್ದುರಾಜು, ಯುವ ಕಾಂಗ್ರೆಸ್ ಮುಖಂಡ ಹೂವಯ್ಯ, ರಾಜೀವ್ ಗಾಂಧಿ ಪಂಚಾಯಿತಿ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರಮೈನಾ, ಪ್ರಮುಖರಾದ ಬಾಲಕೃಷ್ಣ, ವಿಶು, ಹೆಚ್.ಎಲ್. ದಿವಾಕರ್, ಎ.ಪಿ. ದೀಪಕ್, ಸಂದೀಪ್ ಹಾಗೂ ಕಾರ್ಯಕರ್ತರು ಹಾಜರಿದ್ದರು.

ಮಡಿಕೇರಿ ಬ್ಲಾಕ್ ಎಸ್ಸಿ ಘಟಕದ ಅಧ್ಯಕ್ಷ ಗೌತಮ್ ಶಿವಪ್ಪ ಸ್ವಾಗತಿಸಿ, ವೀರಾಜಪೇಟೆ ಬ್ಲಾಕ್ ಅಧ್ಯಕ್ಷ ಉಮೇಶ್ ವಂದಿಸಿದರು.