ಫೈನಲ್ ಪ್ರವೇಶಿಸಿದ ಕುಸ್ತಿಪಟು ರವಿ ದಹಿಯಾ; ಭಾರತಕ್ಕೆ ಬೆಳ್ಳಿ ಖಚಿತ!
ಟೋಕಿಯೊ, ಆ. ೪: ಟೋಕಿಯೊ ಒಲಂಪಿಕ್ಸ್ನಲ್ಲಿ ಭಾರತ ರವಿ ದಹಿಯಾ ೫೭ ಕೆ.ಜಿ. ವಿಭಾಗದ ಸೆಮಿಫೈನಲ್ ಪಂದ್ಯದಲ್ಲಿ ಕಜಕಿಸ್ತಾನದ ನುರಿಸ್ಲಾಮ್ ಸನಾಯೇವ್ರನ್ನು ಮಣಿಸುವ ಮೂಲಕ ಫೈನಲ್ ಪ್ರವೇಶಿಸಿದ್ದಾರೆ. ಒಲಿಂಪಿಕ್ ಕ್ರೀಡಾಕೂಟದಲ್ಲಿ ಚಿನ್ನದ ಪದಕಕ್ಕೆ ಅರ್ಹತೆ ಪಡೆದ ಎರಡನೇ ಭಾರತೀಯ ಕುಸ್ತಿಪಟುವಾಗಿದ್ದಾರೆ. ಇದಕ್ಕೂ ಮೊದಲು, ೨೦೧೨ರ ಲಂಡನ್ ಗೇಮ್ಸ್ನಲ್ಲಿ ಚಿನ್ನದ ಪದಕ ಗೆದ್ದ ಏಕೈಕ ಭಾರತೀಯ ಸುಶೀಲ್ ಕುಮಾರ್ ಆಗಿದ್ದಾರೆ.
ಫೈನಲ್ ಪ್ರವೇಶಿಸಿದ ಜಾವೆಲಿನ್ ಥ್ರೋವರ್ ನೀರಜ್ ಚೋಪ್ರಾ
ಟೋಕಿಯೊ, ಆ. ೪: ಟೋಕಿಯೊ ಒಲಿಂಪಿಕ್ಸ್ ಪುರುಷರ ಜಾವೆಲಿನ್ ಥ್ರೋ(ಈಟಿ ಎಸೆತ)ನಲ್ಲಿ ಸ್ಪರ್ಧಿಸುತ್ತಿರುವ ಭಾರತದ ಭರವಸೆಯ ಅಥ್ಲೀಟ್ ನೀರಜ್ ಚೋಪ್ರಾ ಫೈನಲ್ಗೆ ಪ್ರವೇಶ ಅರ್ಹತೆ ಪಡೆದುಕೊಂಡಿದ್ದಾರೆ. ಮೊದಲ ಪ್ರಯತ್ನದಲ್ಲೇ ಚೋಪ್ರಾ ೮೬.೬೫ ಮೀಟರ್ ಸಾಧನೆಯೊಂದಿಗೆ ಫೈನಲ್ ಹಂತಕ್ಕೆ ನೇರ ಪ್ರವೇಶ ಪಡೆದುಕೊಂಡಿದ್ದಾರೆ. ಅಥ್ಲೆಟಿಕ್ಸ್ ವಿಭಾಗದ ಪುರುಷರ ಜಾವೆಲಿನ್ ಥ್ರೋನಲ್ಲಿ ಚೋಪ್ರಾ ಗ್ರೂಪ್ ‘ಎ'ಯಲ್ಲಿದ್ದಾರೆ. ಗ್ರೂಪ್ ‘ಎ'ನಲ್ಲಿ ಸ್ಪರ್ಧಿಸುತ್ತಿರುವ ಚೋಪ್ರಾ ಪುರುಷರ ಲಾಂಗ್ ಥ್ರೋನ್ ಕ್ವಾಲಿಫಿಕೇಷನ್ ವಿಭಾಗದಲ್ಲಿ ಫೈನಲ್ಗೆ ಅರ್ಹತೆ ಪಡೆದಿದ್ದಾರೆ. ೧೫ನೇ ಪೊಸಿಷನ್ನಲ್ಲಿ ಲಾಂಗ್ ಥ್ರೋನ್ ಮಾಡಿದ ಅವರು ಸುಮಾರು ೮೬.೬೫ ಮೀಟರ್ ಜಾವೆಲಿನ್ ಥ್ರೋ ಮಾಡುವ ಮೂಲಕ ನೇರವಾಗಿ ಫೈನಲ್ಗೆ ಲಗ್ಗೆ ಇಟ್ಟರು. ಈ ಹಿಂದೆ, ಫಿನ್ಲ್ಯಾಂಡ್ನ ಲಸ್ಸಿ ಎಟೆಲಾಟಾಲೋ ಇದೇ ರೀತಿ ಮೊದಲ ಪ್ರಯತ್ನದಲ್ಲಿಯೇ ಫೈನಲ್ಗೆ ಅರ್ಹತೆ ಪಡೆದಿದ್ದರು. ಜಾವೆಲಿನ್ ಥ್ರೋ ಫೈನಲ್ ಪಂದ್ಯ ಮೂರು ದಿನಗಳ ನಂತರ ಅಥವಾ ತಾ. ೭ ರಂದು ನಡೆಯಲಿದೆ. ಇದಕ್ಕೂ ಮೊದಲು ಮಂಗಳವಾರ ಭಾರತೀಯ ಮಹಿಳಾ ಜಾವೆಲಿನ್ ಥ್ರೋ ಸ್ಪರ್ಧಿ ಅನ್ನು ರಾಣಿ ಫೈನಲ್ಗೆ ಅರ್ಹತೆ ಪಡೆಯಲು ವಿಫಲರಾಗಿದ್ದರು. ಈಗ ನೀರಜ್ ಚೋಪ್ರಾ ಅರ್ಹತೆ ಪಡೆದಿದ್ದು, ಪದಕದ ಭರವಸೆ ಮೂಡಿಸಿದ್ದಾರೆ.
ಐಎಸ್ಐಎಸ್ ನಂಟು ಶಂಕೆ; ಇದಿನಬ್ಬ ಪುತ್ರನ ನಿವಾಸದ ಮೇಲೆ ದಾಳಿ
ಉಳ್ಳಾಲ, ಆ. ೪: ಉಳ್ಳಾಲದ ಮಾಜಿ ಶಾಸಕ ಬಿ.ಎಂ. ಇದಿನಬ್ಬ ಪುತ್ರನ ನಿವಾಸದ ಮೇಲೆ ತಾ. ೪ ರಂದು ಬೆಳ್ಳಂಬೆಳಿಗ್ಗೆ ಎನ್ಐಎ ದಾಳಿ ನಡೆದಿದೆ. ಇದಿನಬ್ಬ ಅವರ ಪುತ್ರ ಬಿ.ಎಂ. ಬಾಷಾ ಈ ಮನೆಯಲ್ಲಿ ವಾಸವಿದ್ದು, ಕುಟುಂಬದವರಿಗೆ ಸಿರಿಯಾ ಮೂಲದ ಭಯೋತ್ಪಾದಕ ಸಂಘಟನೆ ಐಎಸ್ಐಎಸ್ ನಂಟಿರುವ ಬಗ್ಗೆ ಶಂಕೆ ವ್ಯಕ್ತವಾದ ಹಿನ್ನೆಲೆ ಈ ದಾಳಿ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮೂಲಗಳ ಪ್ರಕಾರ, ಕೇರಳದಲ್ಲಿದ್ದ ಬಾಷಾ ಅವರ ಪುತ್ರಿ ಹಲವು ವರ್ಷಗಳಿಂದ ನಾಪತ್ತೆಯಾಗಿದ್ದು, ಐಎಸ್ಐಎಸ್ ಸೇರಿರುವ ಶಂಕೆ ವ್ಯಕ್ತವಾಗತೊಡಗಿದೆ. ಬಾಷಾ ಅವರು ಇಲ್ಲಿನ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದರು. ಅವರ ಇಬ್ಬರು ಪುತ್ರರು ವಿದೇಶದಲ್ಲಿದ್ದಾರೆ. ಅವರ ಕುಟುಂಬ ಸದಸ್ಯರು ಐಎಸ್ಐಎಸ್ಗೆ ಸಂಬAಧಿಸಿದ ಯೂಟ್ಯೂಬ್ ಚಾನಲ್ಗಳಿಗೆ ಚಂದಾದಾರರಾಗಿದ್ದರು. ಅಷ್ಟೇ ಅಲ್ಲದೇ ಉಗ್ರ ಸಂಘಟನೆ ಬಗ್ಗೆ ಮೃದು ಧೋರಣೆ ಹೊಂದಿದ್ದರು ಎಂಬ ಆರೋಪ ಕೇಳಿಬಂದಿದೆ. ಎನ್ಐಎ ನಿರ್ದೇಶಕ ಹಾಗೂ ಐಜಿ ಪೊಲೀಸ್ ಶ್ರೇಣಿಯ ಅಧಿಕಾರಿ ದಾಳಿಯ ನೇತೃತ್ವ ವಹಿಸಿದ್ದಾರೆ.
ಡಾ. ಸುಬ್ಬಯ್ಯ ಕೊಲೆ ಪ್ರಕರಣದ ಅಪರಾಧಿಗಳಿಗೆ ಗಲ್ಲು ಶಿಕ್ಷೆ
ಚೆನ್ನೆöÊ, ಆ. ೪: ೨೦೧೩ ರ ಸೆಪ್ಟೆಂಬರ್ ೧೪ ರಂದು ಚೆನ್ನೆöÊನ ಆರ್.ಎ. ಪುರಂನ ಬಿಲ್ರೋತ್ ಆಸ್ಪತ್ರೆಗಳ ಹೊರಗೆ ನರರೋಗ ತಜ್ಞ ಡಾ. ಎಸ್.ಡಿ. ಸುಬ್ಬಯ್ಯ ಅವರನ್ನು ಕೊಲೆ ಮಾಡಿದ ಏಳು ಜನರಿಗೆ ನಗರದ ವಿಚಾರಣಾ ನ್ಯಾಯಾಲಯ ಬುಧವಾರ ಗಲ್ಲು ಶಿಕ್ಷೆ ವಿಧಿಸಿದೆ. ಅಲ್ಲದೆ ಇತರ ಇಬ್ಬರಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ. ವಿಚಾರಣೆಯ ಸಮಯದಲ್ಲಿ ಪ್ರಾಸಿಕ್ಯೂಷನ್ ಸಾಕ್ಷಿಯಾದ ಒಬ್ಬ ಆರೋಪಿಯನ್ನು ಕೋರ್ಟ್ ಆರೋಪ ಮುಕ್ತಗೊಳಿಸಿದೆ. ಡಾ. ಸುಬ್ಬಯ್ಯ ಅವರನ್ನು ಕನ್ಯಾಕುಮಾರಿ ಜಿಲ್ಲೆಯ ಅಂಜುಗ್ರಾಮA ಎಂಬ ತನ್ನ ಸ್ವಗ್ರಾಮದಲ್ಲಿ ೨.೪ ಎಕರೆ ಆಸ್ತಿ ವಿವಾದದಿಂದಾಗಿ ಕೊಲೆ ಮಾಡಲಾಗಿತ್ತು. ಆರ್.ಎ. ಪುರಂ ಆಸ್ಪತ್ರೆಯ ಹೊರಗೆ ಮೂವರು ವ್ಯಕ್ತಿಗಳು ವೈದ್ಯರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿತ್ತು ಮತ್ತು ಒಂಬತ್ತು ದಿನಗಳ ನಂತರ ಸಾವನ್ನಪ್ಪಿದರು. ಭೀಕರ ದಾಳಿಯ ಚಿತ್ರಗಳು ಹತ್ತಿರದ ಅಪಾರ್ಟ್ಮೆಂಟ್ ಸಂಕೀರ್ಣದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮರಾಗಳಲ್ಲಿ ಸೆರೆಯಾಗಿದ್ದು, ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗಿದ್ದವು. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಎನ್. ವಿಜಯರಾಜ್ ತನ್ನ ಅಂತಿಮ ವಾದದಲ್ಲಿ ಎಲ್ಲಾ ಆರೋಪಿಗಳು ನೇರವಾಗಿ ಭಾಗಿಯಾಗಿದ್ದಾರೆ ಮತ್ತು ವೈದ್ಯರನ್ನು ಕೊಲೆ ಮಾಡಲು ಸಂಚು ರೂಪಿಸಿದ್ದರು ಎಂದು ವಾದಿಸಿದ್ದರು. ಅಲ್ಲದೆ ಪ್ರಕರಣದ ಎಲ್ಲ ಆರೋಪಿಗಳಿಗೂ ಮರಣದಂಡನೆ ವಿಧಿಸಬೇಕು ಎಂದು ಮನವಿ ಮಾಡಿದ್ದರು. ವಾದ, ಪ್ರತಿವಾದ ಆಲಿಸಿದ ಸೆಷನ್ಸ್ ಕೋರ್ಟ್, ಪೊನ್ನುಸ್ವಾಮಿ, ತುಳಸಿ, ಬೋರಿಸ್, ವಿಲಿಯಂ, ಜೇಮ್ಸ್ ಸತೀಶ್ ಕುಮಾರ್, ಮುರುಗನ್ ಮತ್ತು ಸೆಲ್ವ ಪ್ರಕಾಶ್ ಅವರಿಗೆ ಐಪಿಸಿ ಸೆಕ್ಷನ್ ೩೦೨ ಮತ್ತು ೧೨೦ಬಿ ಅಡಿಯಲ್ಲಿ ಗಲ್ಲು ವಿಧಿಸಿ, ತೀರ್ಪು ನೀಡಿದ್ದಾರೆ.
ರಾಜ್ಯದಲ್ಲಿ ಕೊರೊನಾದಿಂದ ೩೦ ಸಾವು
ಬೆಂಗಳೂರು, ಆ. ೪: ಕೊರೊನಾ ಎರಡನೇ ಅಲೆ ನಂತರ ಇಳಿಮುಖವಾಗುತ್ತಿದ್ದ ಕೊರೊನಾ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದೆ. ಕಳೆದ ೨೪ ಗಂಟೆಯಲ್ಲಿ ೧,೭೬೯ ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ ೨೯,೧೧,೭೨೭ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ಮಹಾಮಾರಿಗೆ ೩೦ ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ ೩೬,೬೮೦ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ. ಬೆಂಗಳೂರಿನಲ್ಲಿ ಇಂದು ೪೧೧ ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ ೧೨,೨೮,೯೨೬ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ ೪ ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು ೧,೭೧೪ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿAದ ಚೇತರಿಸಿಕೊಂಡವರ ಸಂಖ್ಯೆ ೨೮,೫೦,೭೧೭ಕ್ಕೆ ಏರಿಕೆಯಾಗಿದೆ. ಇನ್ನು ೨೪,೩೦೫ ಸಕ್ರೀಯ ಪ್ರಕರಣಗಳಿವೆ. ರಾಜ್ಯಾದ್ಯಂತ ಇಂದು ೧,೬೯,೪೧೧ ಕೋವಿಡ್ ಟೆಸ್ಟ್ ನಡೆಸಲಾಗಿದ್ದು, ೧,೭೬೯ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. ೧.೦೪ಕ್ಕೆ ಇಳಿದಿದೆ.