ಮಡಿಕೇರಿ, ಆ. ೪: ಜಿಲ್ಲೆಯಲ್ಲಿ ಬುಧವಾರ ೧೦೦ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿವೆ.

ಮಡಿಕೇರಿ ತಾಲೂಕಿನಲ್ಲಿ ೩೭, ಸೋಮವಾರಪೇಟೆ ತಾಲೂಕಿನಲ್ಲಿ ೪೪ ಹಾಗೂ ವೀರಾಜಪೇಟೆ ತಾಲೂಕಿನಲ್ಲಿ ೧೯ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿವೆ.

ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೩೨,೦೦೫ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೩೦ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೩೧,೦೪೬ ಮಂದಿ ಗುಣಮುಖರಾಗಿದ್ದಾರೆ. ೫೬೦ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೧ ಸಾವು ಉಂಟಾಗಿದ್ದು, ಒಟ್ಟು ೩೯೯ ಮರಣ ಪ್ರಕರಣಗಳು ವರದಿಯಾಗಿದೆ. ಕಂಟೈನ್‌ಮೆAಟ್ ವಲಯಗಳ ಸಂಖ್ಯೆ ೯೪ ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ. ೪.೦೧ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.