ಮಡಿಕೇರಿ, ಆ. ೪: ಕೊರೊನಾ ಸಂದರ್ಭ ಸರಕಾರದ ಬೆಲೆ ಏರಿಕೆಯನ್ನು ಖಂಡಿಸಿ ಪ್ರತಿಭಟನೆ ಮಾಡಿದರೆ ಕೊರೊನಾ ನಿಯಮ ಉಲ್ಲಂಘನೆ ಎಂದು ಕಾನೂನು ರೀತಿಯ ಕ್ರಮ ಕೈಗೊಳ್ಳುವ ಪೊಲೀಸ್ ಇಲಾಖೆ, ಹೊರ ಜಿಲ್ಲೆಗಳಿಂದ ಕೊಡಗಿಗೆ ಆಗಮಿಸಿ ನೂರಾರು ಮಂದಿಯನ್ನು ಸೇರಿಸಿ ಪ್ರತಿಭಟನೆ ಮಾಡಿದ ಘಟನೆ ಸಂಬAಧ ಕ್ರಮ ಕೈಗೊಳ್ಳದೆ ಮೌನ ವಹಿಸಿರುವುದು ವಿಷಾಧನೀಯ ಎಂದು ಎಸ್.ಡಿ.ಪಿ.ಐ ಜಿಲ್ಲಾಧ್ಯಕ್ಷ ಎಮ್.ಎ. ಮನ್ಸೂರ್ ಹೇಳಿದರು.

ಇಂದು ನಗರದಲ್ಲಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಜುಲೈ ೨೫ ರಂದು ಬೋಯಿಕೇರಿ ಬಳಿ ನಡೆದ ಅಪಘಾತ ಪ್ರಕರಣವನ್ನು ಮುಂದಿಟ್ಟುಕೊAಡು ಜುಲೈ ೩೦ ರಂದು ನಗರದಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಿದ ಸಂಘ ಪರಿವಾರವು ಕೋವಿಡ್ ನಿಯಮವನ್ನು ಉಲ್ಲಂಘಿ ಸಿದ್ದು, ಪ್ರತಿಭಟನೆಯಲ್ಲಿ ಭಾಗವಹಿಸಿ ದವರ ವಿರುದ್ಧ ಯಾವುದೇ ರೀತಿಯ ಕಾನೂನು ಕ್ರಮ ಕೈಗೊಳ್ಳಲಾಗಿಲ್ಲ. ಈ ರೀತಿ ಸಾಮಾನ್ಯರಿಗೆ ಒಂದು ನ್ಯಾಯ, ಬಿ.ಜೆ.ಪಿ ಅವರಿಗೆ ಇನ್ನೊಂದು ನ್ಯಾಯ ಸರಿಯಲ್ಲ ಎಂದು ಅಭಿಪ್ರಾಯಪಟ್ಟರು. ಆಕಸ್ಮಿಕವಾಗಿ ಆದ ಅಪಘಾತ ಪ್ರಕರಣಕ್ಕೆ ಕೋಮು ಬಣ್ಣ ಹಚ್ಚಿ ಅನಾವಶ್ಯಕವಾಗಿ ಗಲಭೆ ಸೃಷ್ಟಿಸಲಾಗಿದೆ ಎಂದು ಆರೋಪಿಸಿದರು.

ಸಂಘ ಪರಿವಾರದವರಿಗೆ ಸೈನಿಕರ ಬಗ್ಗೆ ಕಾಳಜಿ ಇದ್ದಿದ್ದರೆ, ಕೆಲ ವರ್ಷಗಳ ಹಿಂದೆ ಕರ್ಣಂಗೇರಿ ಗ್ರಾಮದಲ್ಲಿ ಗುಡಿಸಲು ನಿರ್ಮಿಸಿ ವಾಸಿಸುತ್ತಿದ್ದ ಮಾಜಿ ಸೈನಿಕರ ಕುಟುಂಬದ ಗುಡಿ ಸಲನ್ನು ತೆರವುಗೊಳಿಸಿ ಬೀದಿಪಾಲು ಮಾಡಿದಾಗ, ಇವರು ಎಲ್ಲಿದ್ದರು ಎಂದು ಪ್ರಶ್ನಿಸಿದರು. ಅಪಘಾತ ನಡೆದಾಗ ಯೋಧರ ಕುಟುಂಬ ದವರೂ ಹಲ್ಲೆ ನಡೆಸಿದ್ದು ಅವರ ವಿರುದ್ಧ ದೂರು ನೀಡಿದರೂ ಪೊಲೀಸರು ಯಾವುದೇ ಕ್ರಮ ತೆಗೆದುಕೊಳ್ಳದ ಬಗ್ಗೆಯೂ ಅವರು ಆಕ್ಷೇಪಿಸಿದರು.

ಗೋಷ್ಠಿಯಲ್ಲಿ ಎಸ್.ಡಿ.ಪಿ.ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುಲ್ಲಾ ಅಡ್ಕಾರ್, ಕಾರ್ಯದರ್ಶಿ ಮೊಹಮದ್ ಶಫಿ, ಮಡಿಕೇರಿ ನಗರಸಭಾ ಸದಸ್ಯರಾದ ಅಮೀನ್ ಮೊಹಿಸಿನ್, ಅಬ್ದುಲ್ ಬಶೀರ್ ಹಾಜರಿದ್ದರು.