ಸುಂಟಿಕೊಪ್ಪ,ಆ.೫: ನಾಕೂರು ಶಿರಂಗಾಲ ಕಾನ್ಬೈಲ್ ಗ್ರಾಮ ಪಂಚಾಯಿತಿಯ ಗ್ರಾಮ ಸಭೆಯು ತಾ.೬ ರಂದು (ಇಂದು) ಬೆಳಿಗ್ಗೆ ೧೧ ಗಂಟೆಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಗ್ರಾ.ಪಂ. ಅಧ್ಯಕ್ಷ ಬಿ.ಜಿ.ರಮೇಶ್ ಅಧ್ಯಕ್ಷತೆಯಲ್ಲಿ ನಡೆಯಲಿದೆ. ನೋಡೆಲ್ ಅಧಿಕಾರಿಯಾಗಿ ಕೃಷಿ ಇಲಾಖೆಯ ಕೃಷಿ ಅಧಿಕಾರಿ ಮನಸ್ವಿ ಅವರು ಆಗಮಿಸಲಿದ್ದಾರೆ.
ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಗ್ರಾಮ ಸಭೆಯಲ್ಲಿ ಗ್ರಾಮದ ಅಭಿವೃದ್ಧಿಗೆ ಬೇಕಾದ ಸಲಹೆ ಸೂಚನೆಗಳನ್ನು ನೀಡುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗೂಳ್ಳಪ್ಪ ಕೂತಿನಾರ್ ಮನವಿ ಮಾಡಿದ್ದಾರೆ.