ಮಡಿಕೇರಿ, ಆ. ೫: ಕೊಡಗು ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆ ಕೊಂಚ ನಿಯಂತ್ರಣಕ್ಕೆ ಬಂದು ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ.

ಆದರೆ ಇದೀಗ ಜಿಲ್ಲೆಯ ನೆರೆಯ ರಾಜ್ಯವಾದ ಕೇರಳದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆ ಕಾಣುತ್ತಿದೆ. ಇದರಿಂದ ಜಿಲ್ಲೆಯಲ್ಲಿ ಮತ್ತೆ ಕೋವಿಡ್ ಆತಂಕ ಎದುರಾಗಿದೆ. ಜಿಲ್ಲೆಯ ಗಡಿಭಾಗವಾದ ಮಾಕುಟ್ಟ, ಕುಟ್ಟ, ಸಂಪಾಜೆ ಹಾಗೂ ಕರಿಕೆ ಚೆಕ್‌ಪೋಸ್ಟ್ಗಳಲ್ಲಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ.

ಕೇರಳ ಹಾಗೂ ಮಹಾರಾಷ್ಟçದಿಂದ ಜಿಲ್ಲೆಗೆ ಆಗಮಿಸುವ ಪ್ರತಿಯೊಬ್ಬರು ೭೨ ಗಂಟೆಯೊಳಗಿನ ಆರ್.ಟಿ.ಪಿ.ಸಿ.ಆರ್. ನೆಗೆಟಿವ್ ವರದಿ ಇದ್ದಲ್ಲಿ ಮಾತ್ರ ಜಿಲ್ಲೆಗೆ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ.

ಕೇರಳದಲ್ಲಿ ಕೋವಿಡ್ ಮೂರನೇ ಅಲೆ, ಜಿಲ್ಲೆಯಲ್ಲಿ ಆತಂಕ

ಕೊಡಗು ಜಿಲ್ಲೆಯ ನೆರೆಯ ರಾಜ್ಯವಾದ ಕೇರಳದಲ್ಲಿ ಕೋವಿಡ್ ಮೂರನೇ ಅಲೆ ಕಂಡುಬರುತ್ತಿದೆ. ಇದರಿಂದ ಕೊಡಗು ಜಿಲ್ಲೆಯಲ್ಲಿ, ಕೋವಿಡ್ ಮೂರನೇ ಅಲೆ ಭೀತಿ ಎದುರಾಗಿದೆ. ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ.

ಜಿಲ್ಲೆಯಲ್ಲಿ ಬುಧವಾರ ಕೋವಿಡ್ ಪಾಸಿಟಿವಿಟಿ ದರ ಶೇಕಡಾ ನಾಲ್ಕಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಶೇಕಡಾ ೫ಕ್ಕಿಂತಲೂ ಹೆಚ್ಚು ಇದ್ದ ಕಾರಣದಿಂದ, ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳು ಸಂಪೂರ್ಣ ಅನ್‌ಲಾಕ್ ಆದ ನಂತರವಷ್ಟೇ ಕೊಡಗು ಜಿಲ್ಲೆ ಅನ್‌ಲಾಕ್ ಆಗಿದ್ದು.

ಜಿಲ್ಲೆಯಲ್ಲಿ ಕೂಡ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಿದೆ. ಇದೀಗ ಮತ್ತೊಮ್ಮೆ ಜಿಲ್ಲೆಯ ಜನತೆಯಲ್ಲಿ ಲಾಕ್‌ಡೌನ್ ಗುಮ್ಮ ಕಾಡುತ್ತಿದೆ.

ಪ್ರವಾಸಿ ತಾಣಗಳಲ್ಲಿ ಪಾಲನೆಯಾಗದ ಕೋವಿಡ್ ನಿಯಮ

ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳು ಸಾರ್ವಜನಿಕರಿಗೆ ಮುಕ್ತವಾಗಿವೆ. ದೇಶದ ವಿವಿಧ ರಾಜ್ಯಗಳಿಂದ ದಿನನಿತ್ಯ ಸಾವಿರಾರು ಪ್ರವಾಸಿಗರು, ಭೇಟಿ ನೀಡುತ್ತಿದ್ದಾರೆ.

ಆದರೆ ಗುಂಪುಗೂಡಿ, ಮಾಸ್ಕ್ ಧರಿಸದೇ ಕೋವಿಡ್ ನಿಯಮಗಳನ್ನು ಪಾಲಿಸದೆ ಪ್ರವಾಸಿಗರು, ತಮ್ಮಿಷ್ಟ್ಟದ ರೀತಿಯಲ್ಲಿ ಪ್ರವಾಸಿ ತಾಣಗಳಲ್ಲಿ ನಡೆದುಕೊಳ್ಳುತ್ತಿದ್ದಾರೆ.

ಗ್ರಾಮೀಣ ಭಾಗ

ಜಿಲ್ಲೆಯಲ್ಲಿ ಕೋವಿಡ್ ಸೋಂಕು ಕೊಂಚಮಟ್ಟಿಗೆ ನಿಯಂತ್ರಣಕ್ಕೆ ಬಂದಿದ್ದು. ಮಡಿಕೇರಿ, ಆ. ೫: ಕೊಡಗು ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆ ಕೊಂಚ ನಿಯಂತ್ರಣಕ್ಕೆ ಬಂದು ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ.

ಆದರೆ ಇದೀಗ ಜಿಲ್ಲೆಯ ನೆರೆಯ ರಾಜ್ಯವಾದ ಕೇರಳದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆ ಕಾಣುತ್ತಿದೆ. ಇದರಿಂದ ಜಿಲ್ಲೆಯಲ್ಲಿ ಮತ್ತೆ ಕೋವಿಡ್ ಆತಂಕ ಎದುರಾಗಿದೆ. ಜಿಲ್ಲೆಯ ಗಡಿಭಾಗವಾದ ಮಾಕುಟ್ಟ, ಕುಟ್ಟ, ಸಂಪಾಜೆ ಹಾಗೂ ಕರಿಕೆ ಚೆಕ್‌ಪೋಸ್ಟ್ಗಳಲ್ಲಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ.

ಕೇರಳ ಹಾಗೂ ಮಹಾರಾಷ್ಟçದಿಂದ ಜಿಲ್ಲೆಗೆ ಆಗಮಿಸುವ ಪ್ರತಿಯೊಬ್ಬರು ೭೨ ಗಂಟೆಯೊಳಗಿನ ಆರ್.ಟಿ.ಪಿ.ಸಿ.ಆರ್. ನೆಗೆಟಿವ್ ವರದಿ ಇದ್ದಲ್ಲಿ ಮಾತ್ರ ಜಿಲ್ಲೆಗೆ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ.

ಕೇರಳದಲ್ಲಿ ಕೋವಿಡ್ ಮೂರನೇ ಅಲೆ, ಜಿಲ್ಲೆಯಲ್ಲಿ ಆತಂಕ

ಕೊಡಗು ಜಿಲ್ಲೆಯ ನೆರೆಯ ರಾಜ್ಯವಾದ ಕೇರಳದಲ್ಲಿ ಕೋವಿಡ್ ಮೂರನೇ ಅಲೆ ಕಂಡುಬರುತ್ತಿದೆ. ಇದರಿಂದ ಕೊಡಗು ಜಿಲ್ಲೆಯಲ್ಲಿ, ಕೋವಿಡ್ ಮೂರನೇ ಅಲೆ ಭೀತಿ ಎದುರಾಗಿದೆ. ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ.

ಜಿಲ್ಲೆಯಲ್ಲಿ ಬುಧವಾರ ಕೋವಿಡ್ ಪಾಸಿಟಿವಿಟಿ ದರ ಶೇಕಡಾ ನಾಲ್ಕಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಶೇಕಡಾ ೫ಕ್ಕಿಂತಲೂ ಹೆಚ್ಚು ಇದ್ದ ಕಾರಣದಿಂದ, ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳು ಸಂಪೂರ್ಣ ಅನ್‌ಲಾಕ್ ಆದ ನಂತರವಷ್ಟೇ ಕೊಡಗು ಜಿಲ್ಲೆ ಅನ್‌ಲಾಕ್ ಆಗಿದ್ದು.

ಜಿಲ್ಲೆಯಲ್ಲಿ ಕೂಡ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಿದೆ. ಇದೀಗ ಮತ್ತೊಮ್ಮೆ ಜಿಲ್ಲೆಯ ಜನತೆಯಲ್ಲಿ ಲಾಕ್‌ಡೌನ್ ಗುಮ್ಮ ಕಾಡುತ್ತಿದೆ.

ಪ್ರವಾಸಿ ತಾಣಗಳಲ್ಲಿ ಪಾಲನೆಯಾಗದ ಕೋವಿಡ್ ನಿಯಮ

ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳು ಸಾರ್ವಜನಿಕರಿಗೆ ಮುಕ್ತವಾಗಿವೆ. ದೇಶದ ವಿವಿಧ ರಾಜ್ಯಗಳಿಂದ ದಿನನಿತ್ಯ ಸಾವಿರಾರು ಪ್ರವಾಸಿಗರು, ಭೇಟಿ ನೀಡುತ್ತಿದ್ದಾರೆ.

ಆದರೆ ಗುಂಪುಗೂಡಿ, ಮಾಸ್ಕ್ ಧರಿಸದೇ ಕೋವಿಡ್ ನಿಯಮಗಳನ್ನು ಪಾಲಿಸದೆ ಪ್ರವಾಸಿಗರು, ತಮ್ಮಿಷ್ಟ್ಟದ ರೀತಿಯಲ್ಲಿ ಪ್ರವಾಸಿ ತಾಣಗಳಲ್ಲಿ ನಡೆದುಕೊಳ್ಳುತ್ತಿದ್ದಾರೆ.

ಗ್ರಾಮೀಣ ಭಾಗ

ಜಿಲ್ಲೆಯಲ್ಲಿ ಕೋವಿಡ್ ಸೋಂಕು ಕೊಂಚಮಟ್ಟಿಗೆ ನಿಯಂತ್ರಣಕ್ಕೆ ಬಂದಿದ್ದು. ಆದರೆ ಇದೀಗ ಮತ್ತೆ ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿದೆ. ಆದರೆ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಕೋವಿಡ್ ಹೆಚ್ಚುತ್ತಿದೆ.

ಜಿಲ್ಲೆಯ ಸಿದ್ದಾಪುರ, ಕರಡಿಗೋಡು, ನೆಲ್ಲಿಹುದಿಕೇರಿ ಹಾಗೂ ಅಭ್ಯತ್‌ಮಂಗಲ ಭಾಗಗಳಲ್ಲಿ ಕೋವಿಡ್ ಪ್ರಕರಣಗಳಲ್ಲಿ ಏರಿಕೆ ಕಾಣುತ್ತಿದೆ.

ಈ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಚಾರುಲಾತಾ ಸೋಮಲ್ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿ, ಕೋವಿಡ್ ನಿಯಮಗಳನ್ನು ಪಾಲಿಸುವಂತೆ ಸಂಬAಧಪಟ್ಟವರಿಗೆ ಸೂಚನೆ ನೀಡಿದ್ದಾರೆ.

ತುರ್ತು ಸೇವೆಗಳಿಗೆ ಅವಕಾಶ ನೀಡಿ, ಜಿಲ್ಲೆಯ ಗಡಿ ಭಾಗ ಬಂದ್ ಮಾಡಿ

ಕೊಡಗು ಪುಟ್ಟ ಜಿಲ್ಲೆಯಾಗಿದ್ದು, ಜಿಲ್ಲೆಯೂ ಹೆಚ್ಚಾಗಿ ಗ್ರಾಮೀಣ ಭಾಗಗಳಿಂದ ಕೂಡಿದೆ. ಇದೀಗ ನೆರೆಯ ರಾಜ್ಯವಾದ ಕೇರಳದಲ್ಲಿ ಕೋವಿಡ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗುತ್ತಿರುವುದರಿಂದ, ಜಿಲ್ಲೆಯ ಗಡಿಭಾಗಗಳನ್ನು ಬಂದ್ ಮಾಡಿ, ತುರ್ತು ಸೇವೆಗಳಿಗೆ ಮಾತ್ರ ಅವಕಾಶ ನೀಡಿದರೆ, ಜಿಲ್ಲೆಗೆ ಕೋವಿಡ್ ಮೂರನೇ ಅಲೆ ಕಾಲಿಡದಂತೆ ತಡೆಯಬಹುದೆಂದು ಕೊಡಗು ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಪವನ್ ಪೆಮ್ಮಯ್ಯ ಅಭಿಪ್ರಾಯಪಟ್ಟಿದ್ದಾರೆ.

-ಕೆ.ಎಂ ಇಸ್ಮಾಯಿಲ್ ಕಂಡಕರೆ