ಕೂಡಿಗೆ, ಆ. ೬: ಇಲ್ಲಿಗೆ ಸಮೀಪದ ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಡ್ಲಕೊಪ್ಪಲು ಗ್ರಾಮದ ಕೃಷ್ಣಪ್ಪ ಎಂಬವರ ಮನೆ ಗೋಡೆ ಅತಿಯಾದ ಮಳೆಯಿಂದಾಗಿ ಕುಸಿದು ಮನೆಯಲ್ಲಿ ಮಲಗಿದ್ದ ಮಹಿಳೆ ಕಾಲಿನ ಮೇಲೆ ಬಿದ್ದ ಪರಿಣಾಮ ಎರಡು ಕಾಲುಗಳಿಗೆ ಪೆಟ್ಟಾದ ಘಟನೆ ನಡೆದಿದೆ. ಅದೃಷ್ಟವಶಾತ್ ಮಹಿಳೆ ಪ್ರಾಣಪಾಯದಿಂದ ಪಾರಾಗಿದ್ದಾರೆ.

ಶಂಕರಪ್ಪ ಮತ್ತು ಅವರ ಕುಟುಂಬದವರು ಮನೆಯಲ್ಲಿ ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಮನೆಯ ಗೋಡೆಯ ಒಂದು ಭಾಗ ಕುಸಿದಿದೆ. ಪರಿಣಾಮವಾಗಿ ಮಲಗಿದ್ದ ಮಹಿಳೆಯ ಕಾಲಿನ ಮೇಲೆ ಗೋಡೆ ಬಿದ್ದು ಎರಡು ಕಾಲಿಗೆ ಪೆಟ್ಟಾಗಿದೆ. ಅದೃಷ್ಟವಶಾತ್ ಭೂಮಿಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಭೂವಿಕ ಅವರಿಗೆ ಶಿರಂಗಾಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿಗೆ ಸಾಗಿಸಲಾಯಿತು.

ಸ್ಧಳಕ್ಕೆ ಶಿರಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾಗೀರತಿ, ಲೆಕ್ಕಾಧಿಕಾರಿ ಉಷಾ ಸ್ಥಳ ಪರಿಶೀಲನೆ ನಡೆಸಿ ಪರಿಹಾರವನ್ನು ನೀಡುವ ಭರವಸೆಯನ್ನು ನೀಡಿದ್ದಾರೆ.