ರಾಜ್ಯದಲ್ಲಿ ಕೊರೊನಾದಿಂದ ೨೫ ಸಾವು

ಬೆಂಗಳೂರು, ಆ. ೫: ಕೊರೊನಾ ಎರಡನೇ ಅಲೆ ನಂತರ ಇಳಿಮುಖವಾಗುತ್ತಿದ್ದ ಕೊರೊನಾ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದೆ. ಕಳೆದ ೨೪ ಗಂಟೆಯಲ್ಲಿ ೧,೭೮೫ ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ ೨೯,೧೩,೫೧೨ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ ಮಹಾಮಾರಿಗೆ ೨೫ ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ ೩೬,೭೦೫ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ. ಬೆಂಗಳೂರಿನಲ್ಲಿ ಇಂದು ೪೧೪ ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ ೧೨,೨೯,೩೪೦ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ ೫ ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಇಂದು ೧,೬೫೧ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿAದ ಚೇತರಿಸಿಕೊಂಡವರ ಸಂಖ್ಯೆ ೨೮,೫೨,೩೬೮ಕ್ಕೆ ಏರಿಕೆಯಾಗಿದೆ. ಇನ್ನು ೨೪,೩೦೫ ಸಕ್ರೀಯ ಪ್ರಕರಣಗಳಿವೆ. ರಾಜ್ಯಾದ್ಯಂತ ಇಂದು ೧,೬೧,೬೬೨ ಕೋವಿಡ್ ಟೆಸ್ಟ್ ನಡೆಸಲಾಗಿದ್ದು, ೧,೭೮೫ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. ೧.೧೦ಕ್ಕೆ ಇಳಿದಿದೆ.

ಮಾಜಿ ಸಚಿವ ರೋಷನ್ ಬೇಗ್ ಮನೆ ಮೇಲೂ ಇಡಿ ದಾಳಿ

ಬೆಂಗಳೂರು, ಆ. ೫: ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಮನೆ ಬೆನ್ನಲ್ಲೇ, ಮಾಜಿ ಸಚಿವ ರೋಷನ್ ಬೇಗ್ ಮನೆ ಮೇಲೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೂಲಗಳ ಪ್ರಕಾರ ಮಾಜಿ ಸಚಿವ ರೋಷನ್ ಬೇಗ್ ಅವರ ಬೆಂಗಳೂರಿನ ಶಿವಾಜಿನಗರದ ಮನೆಯ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ವಿದೇಶಿ ವ್ಯವಹಾರಗಳು ಕಂಡು ಬಂದ ಹಿನ್ನೆಲೆ, ರೋಷನ್ ಬೇಗ್‌ಗೆ ಸಂಬAಧಿಸಿದ ೬ ಕಡೆ ಏಕಕಾಲದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಡಿ ಅಧಿಕಾರಿಗಳು ಸಿಆರ್‌ಪಿಎಫ್ ಭದ್ರತೆ ನೇತೃತ್ವದಲ್ಲಿ ಬೆಂಗಳೂರಿನ ಶಿವಾಜಿನಗರದಲ್ಲಿರುವ ಮನೆ ಮೇಲೆ ದಾಳಿ ಮಾಡಿದ್ದಾರೆ ಎನ್ನಲಾಗಿದೆ. ಐಎಂಎ ಸಂಸ್ಥೆಯಿAದ ಬಹುಕೋಟಿ ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ಆರ್. ರೋಷನ್ ಬೇಗ್ ಆಸ್ತಿ ಜಪ್ತಿಗೆ ಹೈಕೋರ್ಟ್ ಆದೇಶ ನೀಡಿತ್ತು. ಅದರಂತೆ ಇಂದು ಸರ್ಕಾರ ರೋಷನ್ ಬೇಗ್ ಆಸ್ತಿಯನ್ನು ಜಪ್ತಿಮಾಡಿದೆ. ರೋಷನ್ ಬೇಗ್‌ಗೆ ಸೇರಿದ ಸ್ಥಿರಾಸ್ತಿ, ಬ್ಯಾಂಕ್ ಅಕೌಂಟ್‌ನ ಜಪ್ತಿ ಮಾಡಲಾಗಿದೆ. ದಾಳಿಯ ವೇಳೆ ರೋಷನ್ ಬೇಗ್ ಮನೆಯಲ್ಲೇ ಇದ್ದರು ಎನ್ನಲಾಗಿದೆ. ಇಡಿ ಅಧಿಕಾರಿಗಳಿಂದ ದಾಖಲೆ ಪರಿಶೀಲನೆ ನಡೆಯುತ್ತಿದ್ದು, ಅಧಿಕಾರಿಗಳು ಎಲ್ಲಾ ಲಾಕರ್‌ಗಳನ್ನು ಓಪನ್ ಮಾಡಿಸಿ, ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ಮಾಡುತ್ತಿದ್ದಾರೆ. ಬೆಂಗಳೂರಿನ ಭೂಪಸಂದ್ರದಲ್ಲಿರುವ ರೋಷನ್ ಬೇಗ್ ಪುತ್ರಿಯ ಮನೆ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಾಲ್ವರು ಅಧಿಕಾರಿಗಳ ತಂಡದಿAದ ಮನೆಯಲ್ಲಿ ಪರಿಶೀಲನೆ ನಡೆಯುತ್ತಿದೆ.

ಬೆಂಗಳೂರಿನಲ್ಲಿ ರೂ. ೪.೫ ಕೋಟಿ ಮೌಲ್ಯದ ರಕ್ತಚಂದನ ವಶ

ಬೆಂಗಳೂರು, ಆ. ೫: ಬೆಂಗಳೂರು ಕೇಂದ್ರೀಯ ಅಪರಾಧ ವಿಭಾಗ(ಸಿಸಿಬಿ)ದ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ಬರೋಬ್ಬರಿ ರೂ. ೪.೫ ಕೋಟಿ ಮೌಲ್ಯದ ರಕ್ತಚಂದನ ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ಸಿಸಿಬಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಇಬ್ಬರು ಆರೋಪಿಗಳನ್ನೂ ಕೂಡ ವಶಕ್ಕೆ ಪಡೆದಿದ್ದಾರೆ. ಒಟ್ಟು ರೂ. ೪.೫ ಕೋಟಿ ಮೌಲ್ಯದ ೯ ಟನ್ ರಕ್ತಚಂದನ ಮರಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಎಸ್‌ಟಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪನೆಗೆ ಸಂಪುಟ ಸಭೆ ಅಸ್ತು

ಬೆಂಗಳೂರು, ಆ. ೫: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಬುಧವಾರ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಪರಿಶಿಷ್ಟ ಪಂಗಡದ ಕುಂದುಕೊರತೆ ಪರಿಹರಿಸಲು ಪ್ರತ್ಯೇಕ ಸಚಿವಾಲಯ ಸ್ಥಾಪನೆಗೆ ಅನುಮೋದನೆ ನೀಡಿದೆ. ಇತ್ತೀಚಿನ ಪ್ರವಾಹ ಮತ್ತು ಪ್ರಸ್ತುತ ಕೋವಿಡ್-೧೯ ಪರಿಸ್ಥಿತಿಯ ಹಿನ್ನೆಲೆ ತಮ್ಮ ನೂತನ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಪ್ರಮಾಣವಚನ ಸ್ವೀಕರಿಸಿದ ಕೆಲವು ಗಂಟೆಗಳಲ್ಲೇ ಜಿಲ್ಲಾ ಉಸ್ತುವಾರಿ ನೀಡಿದ್ದ ಬೊಮ್ಮಾಯಿ ಅವರು, ಮೂರು ದಿನಗಳಲ್ಲಿ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡುವುದಾಗಿ ಹೇಳಿದ್ದಾರೆ. ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿದ ನಂತರ ಕೋವಿಡ್-೧೯ರ ಟಾಸ್ಕ್ಫೋರ್ಸ್ನ್ನು ಪುರ‍್ರಚಿಸಲಾಗುವುದು ಎಂದು ಬೊಮ್ಮಾಯಿ ತಿಳಿಸಿದ್ದಾರೆ. ಬೊಮ್ಮಾಯಿ ಸಂಪುಟದ ಮೊದಲ ಸಭೆಯು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಯನ್ನು ಮೇಲ್ವಿಚಾರಣೆ ಮಾಡಲು ಮತ್ತು ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಪ್ರತ್ಯೇಕ ಸಚಿವಾಲಯ ಸ್ಥಾಪಿಸುವ ನಿರ್ಧಾರ ತೆಗೆದುಕೊಂಡಿದೆ. ಈ ಕುರಿತು ಪ್ರತಿಕ್ರಿಯಿಸಿದ ಸಚಿವ ಬಿ. ಶ್ರೀರಾಮುಲು, ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರು ವಿಶೇಷ ಸಚಿವಾಲಯ ಸ್ಥಾಪಿಸುವ ಮೂಲಕ ಮಾದರಿಯಾಗಿದ್ದರು. ಸಮುದಾಯದ ಒಟ್ಟಾರೆ ಅಭಿವೃದ್ಧಿಗೆ ಒತ್ತು ನೀಡುವುದರೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅದನ್ನು ಮುಂದುವರಿಸಿದ್ದಾರೆ. ಕರ್ನಾಟಕದಲ್ಲಿ ನಾವು ಅವರ ಹೆಜ್ಜೆಗಳನ್ನು ಅನುಸರಿಸಿದ್ದೇವೆ ಮತ್ತು ನಮ್ಮ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಸ್‌ಟಿಗಳ ಕಲ್ಯಾಣಕ್ಕಾಗಿ ವಿಶೇಷ ಕಾರ್ಯಾಲಯವನ್ನು ಸ್ಥಾಪಿಸುವ ಕುರಿತು ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದ್ದಾರೆ. ಆದ್ಯತೆಯ ಮೇರೆಗೆ ನಮ್ಮ ವಿನಂತಿಯನ್ನು ಸ್ವೀಕರಿಸಿದ ನಮ್ಮ ಹಿಂದಿನ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ ಎಂದರು.

ಮುಕ್ತ-ಖರ್ಚು ನೀತಿಗಳತ್ತ ಗಮನಹರಿಸಲು ಸಲಹೆ

ಕೋಲ್ಕತ್ತ, ಆ. ೫: ವಿತ್ತೀಯ ಕೊರತೆ ಹಾಗೂ ಬಜೆಟ್ ನಡುವೆ ಸಮತೋಲನಕ್ಕೆ ಹೆಚ್ಚು ಕಾಳಜಿ ವಹಿಸುವುದರ ಬದಲು ಯುರೋಪ್ ಹಾಗೂ ಅಮೇರಿಕಾದ ಮಾದರಿಯಲ್ಲಿ ಮುಕ್ತ-ಖರ್ಚು ನೀತಿಗಳತ್ತ ಭಾರತ ಸರ್ಕಾರ ಹೆಚ್ಚು ಗಮನಹರಿಸಬೇಕೆಂದು ನೊಬೆಲ್ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತçಜ್ಞ ಅಭಿಜಿತ್ ವಿನಾಯಕ್ ಬ್ಯಾನರ್ಜಿ ಅಭಿಪ್ರಾಯಪಟ್ಟಿದ್ದಾರೆ. ಪಶ್ಚಿಮ ಬಂಗಾಳದ ಜಾಗತಿಕ ಸಲಹಾ ಸಮಿತಿ (ಜಿಎಬಿ) ಮುಖ್ಯಸ್ಥರೂ ಆಗಿರುವ ಅಭಿಜಿತ್ ವಿನಾಯಕ್ ಬ್ಯಾನರ್ಜಿ, ರಾಜ್ಯದ ಆರ್ಥಿಕತೆ ಉತ್ತೇಜಿಸುವುದು ದೇಶದ ಆರ್ಥಿಕತೆಯ ಪುನರುಜ್ಜೀವನಕ್ಕೆ ನೇರವಾಗಿ ಸಂಬAಧಿಸಿದೆ ಎಂದು ಹೇಳಿದ್ದಾರೆ. ಈ ಸಾಂಕ್ರಾಮಿಕದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ವಿತ್ತೀಯ ಸಮಸ್ಯೆ ಎದುರಿಸುತ್ತಿದೆ. ಮುಕ್ತ ಖರ್ಚು ನೀತಿಗಿಂತಲೂ ಬಜೆಟ್‌ನ ಸಮತೋಲನದ ಬಗ್ಗೆ ಹೆಚ್ಚು ಗಮನ ಹರಿಸುತ್ತಿದೆ. ಆರ್ಥಿಕತೆ ನಿಧಾನಗತಿಯಲ್ಲಿರುವುದರಿಂದ ಇತರ ರೂಪದ ತೆರಿಗೆ ಸಂಗ್ರಹ ವೇಗ ಕಳೆದುಕೊಂಡಿದ್ದು ಸರ್ಕಾರ ಬಜೆಟ್ ಬ್ಯಾಲೆನ್ಸ್ ಮಾಡಲು ಈ ಅಸ್ತ್ರ ಪ್ರಯೋಗಿಸಲು ಯತ್ನಿಸುತ್ತಿದೆ ಎಂದು ಕೇಂದ್ರ ಸರ್ಕಾರ ವಿವಿಧ ಸರಕುಗಳ ಮೇಲಿನ ಸೆಸ್‌ನ್ನು ಹೆಚ್ಚಿಸಲು ನಿರ್ಧರಿಸಿರುವುದರ ಬಗ್ಗೆ ಕೇಳಿದ ಪ್ರಶ್ನೆಗೆ ಅಭಿಜಿತ್ ಪ್ರತಿಕ್ರಿಯೆ ನೀಡಿದ್ದಾರೆ. ಆದರೆ ಸರ್ಕಾರ ನಡೆಯಬೇಕಾದ ಮಾರ್ಗ ಇದಲ್ಲ ಎಂದು ಬ್ಯಾನರ್ಜಿ ಅಭಿಪ್ರಾಯಪಟ್ಟಿದ್ದಾರೆ. ಸರ್ಕಾರ ಮುಕ್ತವಾಗಿ ಖರ್ಚು ಮಾಡುವ ನೀತಿಗಳನ್ನು ಹೆಚ್ಚು ಅಳವಡಿಸಿಕೊಳ್ಳಬೇಕು ಎಂದು ಹಲವು ಬಾರಿ ಹೇಳಿದ್ದೇನೆ. ಆದರೆ ಯುಎಸ್ ಯುರೋಪಿಯನ್ ಆರ್ಥಿಕತೆಗಳ ಮಾದರಿಯ ನೀತಿಗಳನ್ನು ಅಳವಡಿಸಿಕೊಳ್ಳಲು ಸರ್ಕಾರ ತೀರಾ ಹಿಂಜರಿಯುತ್ತಿತ್ತು ಎಂದು ಬ್ಯಾನರ್ಜಿ ಹೇಳಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಸರ್ಕಾರ ಈ ನಿಟ್ಟಿನಲ್ಲಿ ಹೆಜ್ಜೆ ಇಡುತ್ತಿರುವುದಕ್ಕೆ ಬ್ಯಾನರ್ಜಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹೆಚ್ಚು ಇಂಧನ ದರಗಳಿಂದಾಗಿ ಹಣದುಬ್ಬರ ಏರಿಕೆಯಾಗಿದೆ. ಆದರೆ ಸರ್ಕಾರ ಇತ್ತೀಚಿನ ದಿನಗಳಲ್ಲಿ ಮುಕ್ತವಾಗಿ ಖರ್ಚು ಮಾಡುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಂಡಿದ್ದು, ಹಲವು ಸಡಿಲಿಕೆಗಳನ್ನು ಘೋಷಿಸಿದೆ. ವಿತ್ತೀಯ ಕೊರತೆಗೆ ಕಡಿಮೆ ಜಾಗರೂಕವಾಗಿರುವುದು ಸರಿಯಾದ ಕಾರ್ಯತಂತ್ರ ಎಂದು ನೊಬೆಲ್ ಪ್ರಶಸ್ತಿ ಪುರಸ್ಕೃತರು ಹೇಳಿದ್ದಾರೆ.