ಮಡಿಕೇರಿ, ಆ.೫: ಜಿಲ್ಲೆಯಲ್ಲಿ ಗುರುವಾರ ೭೭ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿವೆ. ಮಡಿಕೇರಿ ತಾಲೂಕಿನಲ್ಲಿ ೧೮, ಸೋಮವಾರಪೇಟೆ ತಾಲೂಕಿನಲ್ಲಿ ೩೨, ವೀರಾಜಪೇಟೆ ತಾಲೂಕಿನಲ್ಲಿ ೨೭ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿವೆ.

ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೩೨,೦೮೨ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೦೭ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೩೧,೦೫೩ ಮಂದಿ ಗುಣಮುಖರಾಗಿದ್ದಾರೆ. ೬೩೦ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ಸಾವು ಉಂಟಾಗಿಲ್ಲ, ಒಟ್ಟು ೩೯೯ ಮರಣ ಪ್ರಕರಣಗಳು ವರದಿಯಾಗಿದೆ. ಕಂಟೈನ್ ಮೆಂಟ್ ವಲಯಗಳ ಸಂಖ್ಯೆ ೯೩ ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.೨.೫೯ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.