ಮಡಿಕೇರಿ, ಆ. ೬: ನಗರದ ಭಾರತೀಯ ಜನತಾ ಪಕ್ಷದ ಜಿಲ್ಲಾ ಕಚೇರಿಗೆ ಸಂಪುಟ ದರ್ಜೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಭೇಟಿ ನೀಡಿದರು.

ಬಳಿಕ ಮಾತನಾಡಿದ ಅವರು, ರಾಜಕೀಯದಿಂದ ಅಧಿಕಾರ ಪಡೆಯಬೇಕು. ಅಧಿಕಾರದಿಂದ ಸಾಮಾಜಿಕವಾಗಿ ದುಡಿಯಬೇಕು. ರಾಜಕಾರಣದ ಉದ್ದೇಶ ಬಿಜೆಪಿ ಅನುಷ್ಠಾನಗೊಳಿಸಿದೆ. ಹಲವು ಸೋಲಿನ ಬಳಿಕ ಪಕ್ಷ ದೊಡ್ಡ ಮಟ್ಟಕ್ಕೆ ಬೆಳೆದಿದೆ. ಪಕ್ಷದ ಕಾರ್ಯಕರ್ತರು ಕೇಂದ್ರ ಹಾಗೂ ರಾಜ್ಯ ಸರಕಾರದ ಯೋಜನೆಗಳು ಜನರಿಗೆ ತಲುಪಿಸುವ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

ಮಹತ್ವದ ನಿರ್ಧಾರ ಹಾಗೂ ಯೋಜನೆಗಳನ್ನು ಸರಕಾರ ಕಾರ್ಯಗತಗೊಳಿಸಿದೆ. ಕೊರೊನಾ ಪರಿಸ್ಥಿತಿ ಸಂದರ್ಭದಲ್ಲಿ ಆಯುಷ್ಮಾನ್ ಯೋಜನೆಯ ಮೂಲಕ ೮೩% ಸೋಂಕಿತರು ಚಿಕಿತ್ಸೆ ಪಡೆದುಕೊಂಡಿದ್ದಾರೆ. ಕಿಸಾನ್ ಸಮ್ಮಾನ್ ಯೋಜನೆ ದೇಶದ ರೈತರಿಗೆ ಪ್ರಯೋಜನವಾಗಿದೆ. ಕೇಂದ್ರ ಸರಕಾರ ನೇರವಾಗಿ ಗ್ರಾ.ಪಂ.ಗಳಿಗೆ ಅನುದಾನ ನೀಡಿದೆ. ಯೋಜನೆಯನ್ನು ಕಟ್ಟಕಡೆಯ ವ್ಯಕ್ತಿಗೆ ತಲುಪಿಸುವ ಕೆಲಸ ಕಾರ್ಯಕರ್ತರು ಮಾಡಬೇಕೆಂದರು.

ಬಿ.ಜೆ.ಪಿ. ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಪ್ರಾಸ್ತಾವಿಕವಾಗಿ ಮಾತನಾಡಿ, ಕೊಡಗಿಗೆ ಸಚಿವ ಸ್ಥಾನದ ನಿರೀಕ್ಷೆ ಇತ್ತು. ರಾಜ್ಯ, ರಾಷ್ಟç ವರಿಷ್ಠರು ಚಿಂತಿಸಿ ಸಂಪುಟ ರಚಿಸಿದ್ದಾರೆ. ಮುಂದೆ ಸಚಿವ ಸ್ಥಾನ ಸಿಗಬಹುದು. ಪಕ್ಕದ ಜಿಲ್ಲೆಯವರು ಉಸ್ತುವಾರಿ ಸಚಿವರಾಗಿ ಬಂದಿರುವುದು ಹಲವು ನಿರೀಕ್ಷೆ ಸೃಷ್ಟಿಸಿದೆ. ನೇರವಾಗಿ ಸಂಪರ್ಕಕ್ಕೂ ಸಿಕ್ಕುತ್ತಾರೆ. ಜಿಲ್ಲೆಯಲ್ಲಿ ಹಲವು ಸಮಸ್ಯೆಗಳಿವೆ ಇದಕ್ಕೆ ಸಚಿವರು ಸ್ಪಂದನ ನೀಡುತ್ತಾರೆ ಎಂದರು.

ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುನೀಲ್ ಸುಬ್ರಮಣಿ, ಮಾಜಿ ಎಂ.ಎಲ್.ಸಿ. ಎಸ್.ಜಿ. ಮೇದಪ್ಪ, ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ಶಾಂತೆಯAಡ ರವಿ ಕುಶಾಲಪ್ಪ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಮೇಶ್ ಹೊಳ್ಳ, ಶಿಸ್ತು ಸಮಿತಿ ಸದಸ್ಯೆ ಪಟ್ಟಡ ರೀನಾ ಪ್ರಕಾಶ್, ದಕ್ಷಿಣ ಕನ್ನಡ ಉಸ್ತುವಾರಿ ಬಿ.ಬಿ. ಭಾರತೀಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುಂಞಗಡ ಅರುಣ್ ಭೀಮಯ್ಯ, ಮಾದಪ್ಪ, ಮಡಿಕೇರಿ ತಾಲೂಕು ಅಧ್ಯಕ್ಷ ಕಾಂಗೀರ ಸತೀಶ್, ನಗರಾಧ್ಯಕ್ಷ ಮನು ಮಂಜುನಾಥ್ ಸೇರಿದಂತೆ ಇನ್ನಿತರರು ಹಾಜರಿದ್ದರು.