ಕುಶಾಲನಗರ, ಆ. ೭: ಕೊಡಗು ಜಿಲ್ಲೆಯ ನಾಲ್ಕು ಕಡೆ ಗಡಿ ಭಾಗದಲ್ಲಿ ಕೋವಿಡ್ ತಪಾಸಣಾ ಕೇಂದ್ರಗಳ ಕಟ್ಟಡ ನಿರ್ಮಾಣಕ್ಕೆ ಜಿಲ್ಲಾಡಳಿತ ಕ್ರಮಕೈಗೊಂಡಿದೆ. ಕುಟ್ಟ, ಮಾಕುಟ್ಟ, ಕರಿಕೆ, ಮತ್ತು ಕುಶಾಲನಗರ ಗಡಿಭಾಗದಲ್ಲಿ ಕೋವಿಡ್ ತಪಾಸಣೆಗಾಗಿ ಮೂಲಭೂತ ವ್ಯವಸ್ಥೆ ಕಲ್ಪಿಸಲು ತಾ. ೬ರಂದು ಮಡಿಕೇರಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೆ.ಜಿ. ಬೋಪಯ್ಯ ಪ್ರಸ್ತಾಪಿಸಿದ್ದರು. ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಈ ಬಗ್ಗೆ ಕ್ರಮ ವಹಿಸಲು ಸೂಚಿಸಿದ್ದರು. ಅದರಂತೆ ಜಿಲ್ಲಾಡಳಿತ ಈ ಸಂಬAಧ ಕುಶಾಲನಗರ ಗಡಿ ಭಾಗದ ಅರಣ್ಯ ತಪಾಸಣಾ ಗೇಟ್ ಎದುರು ಕಟ್ಟಡ ನಿರ್ಮಾಣ ಕಾಮಗಾರಿ ಪ್ರಾರಂಭಿಸಿದೆ.