ಮಡಿಕೇರಿ, ಆ. ೭: ಜಿಲ್ಲೆಯಲ್ಲಿ ಶನಿವಾರ ೭೧ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ ೨೮, ಸೋಮವಾರಪೇಟೆ ತಾಲೂಕಿನಲ್ಲಿ ೨೩. ವೀರಾಜಪೇಟೆ ತಾಲೂಕಿನಲ್ಲಿ ೨೦ ಪ್ರಕರಣಗಳು ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೩೨,೨೩೨ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೯೮ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೩೧,೨೨೩ ಮಂದಿ ಗುಣಮುಖರಾಗಿದ್ದಾರೆ. ೬೧೦ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ಸಾವು ಉಂಟಾಗಿಲ್ಲ, ಒಟ್ಟು ೩೯೯ ಮರಣ ಪ್ರಕರಣಗಳು ವರದಿಯಾಗಿದೆ. ಕಂಟೈನ್ ಮೆಂಟ್ ವಲಯಗಳ ಸಂಖ್ಯೆ ೮೭ ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.೨.೯೮ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.