ಸಿದ್ದಾಪುರ, ಆ. ೭: ನೆಲ್ಲಿಹುದಿಕೇರಿ ವ್ಯಾಪ್ತಿಯಲ್ಲಿ ಕಳೆದ ಬಾರಿಯ ಪ್ರವಾಹಕ್ಕೆ ತುತ್ತಾಗಿ ಮನೆಕಳೆದುಕೊಂಡ ನಿರಾಶ್ರಿತರಿಗೆ ವಸತಿ ಸೌಲಭ್ಯ ಹಾಗೂ ಬಾಡಿಗೆ ಹಣವನ್ನು ಕೂಡಲೇ ನೀಡಬೇಕೆಂದು ಒತ್ತಾಯಿಸಿ ನೆಲ್ಲಿಹುದಿಕೇರಿ ಬಿಜೆಪಿ ಶಕ್ತಿ ಕೇಂದ್ರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು.

ಈ ಸಂದÀರ್ಭದಲ್ಲಿ ಸೋಮವಾರಪೇಟೆ ತಾಲೂಕು ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪದ್ಮನಾಭ್ ಮಾತನಾಡಿ, ನೆಲ್ಲಿಹುದಿಕೇರಿ ವ್ಯಾಪ್ತಿಯಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕೇರಳದಿಂದ ಬರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಆರ್‌ಟಿಪಿಸಿಆರ್ ಕಡ್ಡಾಯಗೊಳಿಸಿರುವುದು ಸ್ವಾಗತಾರ್ಹವಾಗಿದ್ದರೂ ಕೂಡ ನಕಲಿ ಆರ್‌ಟಿಪಿಸಿಆರ್ ಮಾಡುವವರು ಇರುವುದರಿಂದ ಪೊಲೀಸ್ ಇಲಾಖೆ ತಪಾಸಣಾ ಕೇಂದ್ರದಲ್ಲಿ ಹೆಚ್ಚು ನಿಗಾ ವಹಿಸಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.

ಈ ಸಂದÀರ್ಭದಲ್ಲಿ ನೆಲ್ಲಿಹುದಿಕೇರಿ ಬಿಜೆಪಿ ಶಕ್ತಿ ಕೇಂದ್ರ ಪ್ರಮುಖ್ ಬೆಳ್ಳಿಯಪ್ಪ, ಪ್ರಮುಖರಾದ ನಿತಿನ್, ಅನೀಶ್ ಇನ್ನಿತರರು ಹಾಜರಿದ್ದರು.