ಸೋಮವಾರಪೇಟೆ, ಆ. ೭: ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸ ಮಾಡುತ್ತಿರುವ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ, ಇತರೆ ಜನಾಂಗದವರು ಹಾಗೂ ವಿಶೇಷಚೇತನರ ಕಲ್ಯಾಣಕ್ಕಾಗಿ ಪಟ್ಟಣ ಪಂಚಾಯಿತಿ ನಿಧಿಯಡಿ ಮೀಸಲಿರಿಸಿದ ಶೇ. ೨೪.೧೦, ೭.೨೫ ಹಾಗೂ ಶೇ. ೫ ಯೋಜನೆಯಡಿ ಸೌಲಭ್ಯಗಳನ್ನು ನೀಡಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಫಲಾನುಭವಿಗಳು ಅಗತ್ಯ ದಾಖಲಾತಿಗಳೊಂದಿಗೆ ತಾ. ೨೩ರ ಒಳಗಾಗಿ ಪಾಸ್ ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಜಾತಿ ಮತ್ತು ಆದಾಯ ದೃಢೀಕರಣ ಪತ್ರ, ವಾಸದ ಬಗ್ಗೆ ದಾಖಲಾತಿ, ಮತದಾರರ ಗುರುತಿನ ಚೀಟಿಗಳನ್ನು ಆಧಾರ್ ಕಾರ್ಡ್ನೊಂದಿಗೆ ಮುಖ್ಯಾಧಿಕಾರಿಯವರು, ಪಟ್ಟಣ ಪಂಚಾಯಿತಿ ಸೋಮವಾರಪೇಟೆ ಇವರಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಪಂಚಾಯಿತಿ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಮುಖ್ಯಾಧಿಕಾರಿ ನಾಚಪ್ಪ ತಿಳಿಸಿದ್ದಾರೆ.