ನಾಪೋಕ್ಲು, ಆ. ೮: ನಾಪೋಕ್ಲು-ವೀರಾಜಪೇಟೆ ಮುಖ್ಯ ರಸ್ತೆಯ ಕೋಟೇರಿ ಬಳಿ ರಸ್ತೆ ಹಾಳಾಗಿ ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು. ಇದನ್ನು ಮನಗಂಡ ನಾಪೋಕ್ಲು ಗ್ರಾಮ ಪಂಚಾಯಿತಿ ಸದಸ್ಯ ಅಶ್ರಫ್ ತಮ್ಮ ಸ್ವಂತ ಖರ್ಚಿನಲ್ಲಿ ಜೆಸಿಬಿ ಯಂತ್ರ ಬಳಸಿ ಸ್ನೇಹಿತರ ಸಹಕಾರದೊಂದಿಗೆ ರಸ್ತೆ ದುರಸ್ತಿ ಕಾರ್ಯ ನಡೆಸಿದರು.