ಸೋಮವಾರಪೇಟೆ, ಆ. ೭: ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ಜಾತ್ಯತೀತ ಜನತಾದಳ ಪಕ್ಷವನ್ನು ಸಿದ್ಧಗೊಳಿಸಲು ಈಗಾಗಲೇ ಕ್ರಮವಹಿಸಿದ್ದು, ತಾ. ೯ ರಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ ಅವರು ಜಿಲ್ಲೆಗೆ ಭೇಟಿ ನೀಡಲಿದ್ದಾರೆ ಎಂದು ಪಕ್ಷದ ಕ್ಷೇತ್ರ ಸಮಿತಿ ಅಧ್ಯಕ್ಷ ಸಿ.ಎಸ್. ನಾಗರಾಜ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಪಕ್ಷದ ಸಂಘಟನೆ, ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಹಾಗೂ ಮುಂಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಪಕ್ಷವನ್ನು ಬಲಪಡಿಸುವ ವಿಷಯವಾಗಿ ಚರ್ಚಿಸಲು ತಾ. ೯ ರಂದು ಪೂರ್ವಾಹ್ನ ೧೧ ಗಂಟೆಗೆ ಸೋಮವಾರಪೇಟೆಯ ಒಕ್ಕಲಿಗರ ಸಮುದಾಯ ಭವನದಲ್ಲಿ ಕಾರ್ಯಕರ್ತರ ಸಭೆಯನ್ನು ಕರೆಯಲಾಗಿದ್ದು, ಸಭೆಯಲ್ಲಿ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಸೇರಿದಂತೆ ಇತರ ಪ್ರಮುಖರು ಭಾಗಿಯಾಗಲಿದ್ದಾರೆ ಎಂದರು.

ಗೋಷ್ಠಿಯಲ್ಲಿ ಪಕ್ಷದ ಹಿಂದುಳಿದ ಘಟಕದ ಜಿಲ್ಲಾ ಅಧ್ಯಕ್ಷ ಎ.ಜಿ. ವಿಜಯ, ಕುಶಾಲನಗರ ತಾಲೂಕು ಜೆಡಿಎಸ್ ಅಧ್ಯಕ್ಷ ಪಿ.ಡಿ. ರವಿಕುಮಾರ್, ಯುವ ಘಟಕದ ಸೋಮವಾರಪೇಟೆ ತಾಲೂಕು ಅಧ್ಯಕ್ಷ ಹೆಚ್.ಕೆ ತ್ರಿಶೂಲ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸ್ವಾಗತ್ ಕುಶಾಲಪ್ಪ, ಸೋಮವಾರಪೇಟೆ ತಾಲೂಕು ಉಪಾಧ್ಯಕ್ಷ ಬಿ.ಕೆ. ನಂದೀಶ್ ಉಪಸ್ಥಿತರಿದ್ದರು.