ಕೂಡಿಗೆ, ಆ. ೮: ವಿಷ ಸೇವಿಸಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೂಡುಮಂಗಳೂರಿನಲ್ಲಿ ನಡೆದಿದೆ.

ಕೂಡುಮಂಗಳೂರು ಗ್ರಾಮದ ನಿವಾಸಿ ಮಲ್ಲಿಕಾರ್ಜುನ ಎಂಬವರ ಪುತ್ರ ಎಲೆಕ್ಟಿçಷಿಯನ್ ಚರಣ್ (೨೬) ಆತ್ಮಹತ್ಯೆ ಮಾಡಿಕೊಂಡ ಯುವಕ. ಹಾರಂಗಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಸಂದರ್ಭ ವಿಷಯ ತಿಳಿದ ಸ್ನೇಹಿತರು ಕುಶಾಲನಗರ ಸರಕಾರಿ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.