
ಭಾಗಮಂಡಲ, ಆ. ೮: ಮಳೆಯ ರೌದ್ರಾವತಾರ ಕಡಿಮೆಯಾಗಿ ಕಾವೇರಿ ನದಿಯು ಶಾಂತಗೊಳ್ಳಲಿ ಎಂಬ ಉದ್ದೇಶದಿಂದ ಭಾಗಮಂಡಲದಲ್ಲಿ ಪೊಲಿಂಕಾನ ಉತ್ಸವವನ್ನು ಭಾನುವಾರ ಸಾಂಪ್ರದಾಯಿಕ ವಿಧಿವಿಧಾನಗಳೊಂದಿಗೆ ಆಚರಿಸಲಾಯಿತು. ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಹೆಚ್ಚು ಪ್ರಚಾರ ಮಾಡದೇ ಭಗಂಡೇಶ್ವರ ದೇವಾಲಯದಲ್ಲಿ ಬೆಳಿಗ್ಗೆ ೯.೩೦ ಗಂಟೆಗೆ ಬಾಳೆದಿಂಡಿನ ಉತ್ಸವ ಮಂಟಪದೊAದಿಗೆ ಕಾವೇರಿ ಮಾತೆಗೆ ವಸ್ತಾçಭರಣ, ಕರಿಮಣಿ, ಬಿಚ್ಚೋಲೆ, ಸೀರೆ, ಬೆಳ್ಳಿತಟ್ಟೆ, ಬೆಳ್ಳಿತೊಟ್ಟಿಲು, ಬೆಳ್ಳಿಮಗು, ಕರಿಮಣಿ ಬಿಚ್ಚೋಲೆ ಬೆಳ್ಳಿಯ ತಟ್ಟೆಯಲ್ಲಿಟ್ಟು ಪೂಜಿಸಲಾಯಿತು. ಚಂಡೆವಾದ್ಯದೊAದಿಗೆ ಬಾಳೆದಿಂಡುಗಳಿAದ ರಚಿಸಲಾದ ಪೊಲಿಂಕಾನ ಮಂಟಪವನ್ನು ಭಗಂಡೇಶ್ವರ ದೇವಾಲಯಕ್ಕೆ ಒಂದು ಸುತ್ತು ಪ್ರದಕ್ಷಿಣೆ ಬಂದು ಮಂಗಳಾರತಿ ನಡೆಸಿದ ನಂತರ ತ್ರಿವೇಣಿ ಸಂಗಮದ ಬಳಿಗೆ ಸಾಂಪ್ರದಾಯಿಕ
(ಮೊದಲ ಪುಟದಿಂದ) ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದ ನಂತರ ನದಿ ನೀರಿನಲ್ಲಿ ಬಾಳೆದಿಂಡಿನ ಮಂಟಪವನ್ನು ತೇಲಿಬಿಡಲಾಯಿತು. ಬಹಳ ಹಿಂದಿನಿAದ ಭಾಗಮಂಡಲದಲ್ಲಿ ಪೊಲಿಂಕಾನ ಉತ್ಸವವನ್ನು ಸಾಂಪ್ರದಾಯಿಕ ರೀತಿಯಲ್ಲಿ ಆಚರಿಸಿಕೊಂಡು ಬರಲಾಗುತ್ತಿದೆ.
ಹಿನ್ನೆಲೆಯೊಂದರ ಪ್ರಕಾರ ಮಹಿಳೆಯೊಬ್ಬರಿಗೆ ಚೊಚ್ಚಲ ಹೆರಿಗೆಗೆಂದು ತವರಿಗೆ ಹೋಗಬೇಕಾಗಿ ಬಂದ ಸಂದರ್ಭ ನದಿಯಲ್ಲಿ ಪ್ರವಾಹವಿದ್ದ ಕಾರಣ ನದಿಗೆ ಬಾಗಿನ ಹರಕೆ ಸಲ್ಲಿಸುತ್ತಾಳೆ. ಬಳಿಕ ಪ್ರವಾಹ ಇಳಿಮುಖಗೊಂಡು ಆಕೆ ತವರಿಗೆ ತೆರಳುವಂತಾಯಿತು. ಈ ಹಿನ್ನೆಲೆಯಲ್ಲಿ ಪ್ರತಿವರ್ಷ ನದಿಗೆ ಬಾಗಿನ ಅರ್ಪಿಸುವ ಸಂಪ್ರದಾಯ ನಡೆದು ಬಂದಿದೆ.
ಇನ್ನೊಂದು ಮೂಲದ ಪ್ರಕಾರ ರೌದ್ರಾವತಾರಗೊಂಡ ನದಿ ಶಾಂತಗೊಳ್ಳುವುದರೊAದಿಗೆ ರೈತರ ಹಿತಕ್ಕಾಗಿ ಕೈಗೊಂಡ ಸಾಂಪ್ರದಾಯಿಕ ಕ್ರಮವನ್ನು ಹಿಂದಿನ ಕಾಲದಿಂದ ಉತ್ಸವವಾಗಿ ಮುಂದುವರಿಸಿಕೊAಡು ಬರಲಾಗುತ್ತಿದೆ. ಮತ್ತೊಂದು ಮೂಲದ ಪ್ರಕಾರ ಬಸುರಿ ಹೆಂಗಸಿಗೆ ಕಿತ್ತಳೆ ಹಣ್ಣು ತಿನ್ನುವ ಬಯಕೆಯಾಗಿ ನದಿಯ ಇನ್ನೊಂದು ದಡದಲ್ಲಿದ್ದ ಮಹಿಳೆ ಕಾವೇರಿ ನದಿಗೆ ಬಾಗಿನ ಅರ್ಪಿಸಿದಳು. ನದಿ ಇಬ್ಭಾಗವಾಗಿ ಮತ್ತೊಂದು ದಡಕ್ಕೆ ತೆರಳಲು ಅವಕಾಶವಾದ ಹಿನ್ನೆಲೆ ಸಾಂಪ್ರದಾಯಿಕವಾಗಿ ಈ ಆಚರಣೆಯನ್ನು ನಡೆಸಿಕೊಂಡು ಬರಲಾಯಿತು.
ವಿವಿಧ ಪೂಜಾ ಕಾರ್ಯಕ್ರಮಗಳೊಂದಿಗೆ ಈ ವರ್ಷವೂ ಪೊಲಿಂಕಾನ ಉತ್ಸವವನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು. ಪ್ರತಿ ವರ್ಷ ಅಮಾವಾಸ್ಯೆ ಹಿನ್ನೆಲೆಯಲ್ಲಿ ಕೇರಳದಿಂದ ಭಕ್ತರು ಆಗಮಿಸುತ್ತಿದ್ದರು. ಕೊರೊನಾ ಹಿನ್ನೆಲೆಯಲ್ಲಿ ಗಡಿಯಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರಿಂದ ಈ ವರ್ಷ ಭಕ್ತರ ಕೊರತೆ ಇತ್ತು. ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿ ಭಾಗಮಂಡಲ ಭಗಂಡೇಶ್ವರ ದೇವಾಲಯದ ತಕ್ಕ ಮುಖ್ಯಸ್ಥ ಬಳ್ಳಡ್ಕ ಅಪ್ಪ್ಪಾಜಿ, ತಲಕಾವೇರಿ ದೇವಾಲಯದ ತಕ್ಕಮುಖ್ಯಸ್ಥ ಕೋಡಿ ಮೋಟಯ್ಯ, ಭಾಗಮಂಡಲ ದೇವಾಲಯದ ಅರ್ಚಕರಾದ ರವಿಭಟ್, ಕುಶಭಟ್ ನೇತೃತ್ವದಲ್ಲಿ ಉತ್ಸವ ನಡೆಯಿತು. ಭಗಂಡೇಶ್ವರ ದೇವಾಲಯದ ಸಿಬ್ಬಂದಿ ವರ್ಗ ಪಾಲ್ಗೊಂಡಿದ್ದರು.
-ಸುನಿಲ್ ಕುಯ್ಯಮುಡಿ