ಶನಿವಾರಸAತೆ, ಆ. ೭: ಕೊಡ್ಲಿಪೇಟೆ ಹೋಬಳಿಯ ಬ್ಯಾಡಗೊಟ್ಟ ಗ್ರಾಮ, ಹ್ಯಾಂಡ್ ಪೋಸ್ಟ್ ಬಳಿ ೧೦ ದಿನಗಳ ಹಿಂದೆ ಕೆಳಕೊಡ್ಲಿ ಗ್ರಾಮದ ನಿವಾಸಿ ಚೇತನ್ ಎಂಬವರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಮೂವರು ಆರೋಪಿಗಳ ಪೈಕಿ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಶನಿವಾರಸAತೆ ಪೊಲೀಸ್ ಇನ್ಸ್ಪೆಕ್ಟರ್ ಎಸ್. ಪರಶಿವಮೂರ್ತಿ ಮಾರ್ಗದರ್ಶನದಲ್ಲಿ ರಾತ್ರಿ ಪೊಲೀಸ್ ಠಾಣಾಧಿಕಾರಿ ಹೆಚ್.ಎಂ. ದೇವರಾಜ್ ಹಾಗೂ ಅಪರಾಧ ಪತ್ತೆದಳದ ಸಿಬ್ಬಂದಿಗಳಾದ ಲೋಕೇಶ್, ಮುರುಳಿ, ಡಿ.ವೈ. ಡಿಂಪಲ್, ಎಂ.ಎಸ್. ಪಾಳ್ಯದಲ್ಲಿ ಬ್ಯಾಡಗೊಟ್ಟ ಗ್ರಾಮದ ನಿವಾಸಿ ಬಿ.ಎ. ಜಾಬೀರ್ (೩೦) ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಯನ್ನು ಸೋಮವಾರಪೇಟೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.