ಸೋಮವಾರಪೇಟೆ, ಆ. ೯: ರಾಜ್ಯ ಬಿಜೆಪಿ ಸರ್ಕಾರ ಕೊಡಗು ಜಿಲ್ಲೆಯನ್ನು ಸಂಪೂರ್ಣ ಕಡೆಗಣಿಸಿದೆ ಎಂದು ಆರೋಪಿಸಿರುವ ಜಯ ಕರ್ನಾಟಕ ಸಂಘಟನೆ, ಕೂಡಲೇ ಜಿಲ್ಲೆಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿದೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಸಂಘದ ಅಧ್ಯಕ್ಷ ಸಿ.ಬಿ. ಸುರೇಶ್ಶೆಟ್ಟಿ ಹಾಗೂ ಕಾರ್ಯದರ್ಶಿ ರಫೀಕ್ ಅವರುಗಳು, ಸರಕಾರದ ಬೊಕ್ಕಸಕ್ಕೆ ಹೆಚ್ಚಿನ ಆದಾಯ ತರುತ್ತಿರುವ ಕೊಡಗು ಜಿಲ್ಲೆ, ಕಾಫಿ ಹಾಗೂ ಕಾಳುಮೆಣಸು ರಫ್ತಿನಲ್ಲಿಯೂ ಕೂಡ ಅಂರ್ರಾಷ್ಟಿçÃಯ ಮಟ್ಟದಲ್ಲಿ ಖ್ಯಾತಿ ಗಳಿಸಿದೆ. ಇದರೊಂದಿಗೆ ಜಿಲ್ಲೆಯ ಸಮಸ್ಯೆಗಳೂ ಅಧಿಕವಿದ್ದು, ಸಮಗ್ರ ಅಭಿವೃದ್ಧಿಯಾಗಬೇಕು. ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಾಣಬೇಕೆಂದರೆ ಕೊಡಗು ಜಿಲ್ಲೆಗೆ ಸಚಿವ ಸ್ಥಾನ ನೀಡಲೇಬೇಕಿದೆ ಎಂದು ಆಗ್ರಹಿಸಿದ್ದಾರೆ.
ಜಯ ಕರ್ನಾಟಕ ಸಂಘಟನೆ ಪಕ್ಷಾತೀತವಾಗಿದ್ದು, ಜಿಲ್ಲೆಯ ಅಭಿವೃದ್ಧಿಯ ದೃಷ್ಟಿಯನ್ನು ಗಮನದಲ್ಲಿರಿಸಿ ಈ ಆಗ್ರಹ ಮಾಡುತ್ತಿದ್ದು, ಕೂಡಲೇ ಕೊಡಗು ಜಿಲ್ಲೆಗೆ ಸಚಿವ ಸ್ಥಾನ ನೀಡುವ ಮೂಲಕ ಸಮಗ್ರ ಅಭಿವೃದ್ಧಿಗೆ ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಸೇರಿದಂತೆ ಬಿಜೆಪಿ ಮುಖಂಡರುಗಳು ಮುಂದಾಗಬೇಕೆAದು ಒತ್ತಾಯಿಸಿದ್ದಾರೆ.