ಮಡಿಕೇರಿ, ಆ. ೯: ಜಿಲ್ಲೆಯಲ್ಲಿ ಸೋಮವಾರ ೮ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ. ೮ ಪ್ರಕರಣಗಳು ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿವೆ. ಮಡಿಕೇರಿ ತಾಲೂಕಿನಲ್ಲಿ ೪, ಸೋಮವಾರಪೇಟೆ ತಾಲೂಕಿನಲ್ಲಿ ೪ ಪ್ರಕರಣಗಳು ಕಂಡುಬAದಿವೆ.

ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೩೨,೩೫೨ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೮೦ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೩೧,೩೬೮ ಮಂದಿ ಗುಣಮುಖರಾಗಿದ್ದಾರೆ. ೫೮೫ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ಸಾವು ಉಂಟಾಗಿಲ್ಲ, ಒಟ್ಟು ೩೯೯ ಮರಣ ಪ್ರಕರಣಗಳು ವರದಿಯಾಗಿವೆ. ಕಂಟೈನ್‌ಮೆAಟ್ ವಲಯಗಳ ಸಂಖ್ಯೆ ೯೫ ಆಗಿವೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.೨.೫೨ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.