ಸೋಮವಾರಪೇಟೆ, ಆ. ೯: ರಾಷ್ಟಿçÃಯ ಪಕ್ಷಗಳ ಜನವಿರೋಧಿ ಆಡಳಿತಕ್ಕೆ ಮುಂದಿನ ದಿನಗಳಲ್ಲಿ ಮತದಾರರೇ ತಕ್ಕ ಉತ್ತರ ನೀಡ ಬೇಕೆಂದು ಜಾತ್ಯತೀತ ಜನತಾದಳದ ರಾಜ್ಯಾಧ್ಯಕ್ಷ ಹಾಗೂ ಸಕಲೇಶಪುರ ಕ್ಷೇತ್ರದ ಶಾಸಕ ಹೆಚ್.ಕೆ. ಕುಮಾರಸ್ವಾಮಿ ಹೇಳಿದರು.

ಇಲ್ಲಿನ ಒಕ್ಕಲಿಗರ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ, ಜಿಲ್ಲಾ ಜೆಡಿಎಸ್‌ನ ವಿವಿಧ ಘಟಕಗಳಿಗೆ ತಾತ್ಕಾಲಿಕವಾಗಿ ನೇಮP Àಗೊಂಡಿರುವ ಪದಾಧಿಕಾರಿಗಳಿಗೆ ಆದೇಶ ಪತ್ರ ವಿತರಿಸಿ ಅವರು ಮಾತನಾಡಿದರು.

ರಾಷ್ಟಿçÃಯ ಪಕ್ಷಗಳಿಂದ ಜನರು ನಿರಂತರವಾಗಿ ಸಂಕಷ್ಟ ಎದುರಿಸುತ್ತಿದ್ದು, ಅಧಿಕಾರಕ್ಕೆ ಬರುವ ಪಕ್ಷಗಳು ಜನವಿರೋಧಿ ನೀತಿ ಅನುಸರಿಸುತ್ತಿವೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಇಂತಹ ಸರ್ಕಾರ ಬೇಕೇ, ಬೇಡವೇ? ಎಂಬ ಬಗ್ಗೆ ರಾಜ್ಯದ ಜನತೆಯೇ ತೀರ್ಮಾನ ಮಾಡಬೇಕಿದೆ ಎಂದು ಕುಮಾರಸ್ವಾಮಿ ಅಭಿಪ್ರಾಯಿಸಿದರು.

ಕೊಡಗಿನಲ್ಲಿ ಭೂ ಕುಸಿತವಾಗಿ ಮನೆಗಳನ್ನು ಕಳೆದುಕೊಂಡ ಸಂದರ್ಭ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಅವರು ೮೦೦ ಮನೆಗಳನ್ನು

(ಮೊದಲ ಪುಟದಿಂದ) ನಿರ್ಮಿಸಲು ಅನುದಾನ ನೀಡಿದರು. ಆದರೆ ಬಿಜೆಪಿಯವರು ಅದನ್ನು ಉದ್ಘಾಟಿಸಿದ್ದಾರೆ. ಇದರೊಂದಿಗೆ ಆಡಳಿತವನ್ನು ಸುಧಾರಿಸುವ ನಿಟ್ಟಿನಲ್ಲಿ ೨ ಹೆಚ್ಚುವರಿ ತಾಲೂಕನ್ನು ರಚಿಸಲಾಗಿದೆ. ಆದರೆ ಪ್ರಚಾರದ ಕೊರತೆಯಿಂದ ಜೆಡಿಎಸ್ ಸರ್ಕಾರದ ಕೆಲಸಗಳ ಮಾಹಿತಿ ಜನರಿಗೆ ತಲುಪಿಲ್ಲ ಎಂದು ವಿಷಾಧಿಸಿದರು.

ಪ್ರಸ್ತುತ ಬಿಜೆಪಿ ನೇತೃತ್ವದ ಬಸವರಾಜ ಬೊಮ್ಮಾಯಿ ಸರ್ಕಾರ ಮಲೆನಾಡು ಭಾಗವನ್ನು ಕಡೆಗಣಿಸಿದೆ. ಕೊಡಗು ಸೇರಿದಂತೆ ಹಾಸನ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ ಭಾಗಕ್ಕೆ ಒಂದೇ ಒಂದು ಸಚಿವ ಸ್ಥಾನ ನೀಡಿಲ್ಲ. ಈ ಭಾಗವನ್ನು ಬಿಜೆಪಿ ನಿರ್ಲಕ್ಷಿಸಿದೆ ಎಂದರು.

ಸಭೆಯಲ್ಲಿ ಉಪಸ್ಥಿತರಿದ್ದ ಕೊಡಗು ಉಸ್ತುವಾರಿ ಹಾಗೂ ಮಾಜೀ ಸಚಿವ ಬಿ.ಬಿ. ಲಿಂಗಯ್ಯ ಅವರು ಮಾತನಾಡಿ, ಕೊಡಗಿನಲ್ಲಿ ನಿರಂತರವಾಗಿ ಮತದಾರರು ಬಿಜೆಪಿಯನ್ನು ಬೆಂಬಲಿಸುತ್ತಾ ಬಂದಿದ್ದರೂ ಹೆಚ್ಚಿನ ಪ್ರಗತಿ ಸಾಧ್ಯವಾಗಿಲ್ಲ ಎಂದರು.

ಪಕ್ಷದ ಜಿಲ್ಲಾಧ್ಯಕ್ಷ ಕೆ.ಎಂ.ಬಿ. ಗಣೇಶ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಅವೈಜ್ಞಾನಿಕ ಲಾಕ್‌ಡೌನ್ ಅಳವಡಿಸುವ ಮೂಲಕ ಜನತೆಯನ್ನು ಕಷ್ಟದ ಕೂಪಕ್ಕೆ ತಳ್ಳಿದೆ.

ಸಭೆಯ ಅಧ್ಯಕ್ಷತೆಯನ್ನು ಜೆಡಿಎಸ್ ತಾಲೂಕು ಅಧ್ಯಕ್ಷ ಸಿ.ಎಸ್. ನಾಗರಾಜು ವಹಿಸಿದ್ದರು. ಪಕ್ಷದ ಮುಖಂಡರಾದ ಕೆ.ಟಿ.ಪರಮೇಶ್, ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಇಸಾಕ್ ಖಾನ್, ಕಾರ್ಯಾಧ್ಯಕ್ಷ ಬೋಜಪ್ಪ, ಯುವ ಘಟಕದ ಅಧ್ಯಕ್ಷ ಸಿ.ಎಲ್. ವಿಶ್ವ ಅವರುಗಳು ಮಾತನಾಡಿದರು.

ವೇದಿಕೆಯಲ್ಲಿ ಜೆಡಿಎಸ್ ಮುಖಂಡರುಗಳಾದ ಆದಿಲ್ ಪಾಷಾ, ಕಾಟ್ನಮನೆ ವಿಠಲ್‌ಗೌಡ, ಜಲಾ ಹೂವಯ್ಯ, ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ಎಂ.ಎ. ರುಬೀನಾ, ಹಿಂದುಳಿದ ಘಟಕದ ಅಧ್ಯಕ್ಷ ಎ.ಜಿ. ವಿಜಯ, ಯುವ ಘಟಕದ ಅಧ್ಯಕ್ಷ ತ್ರಿಶೂಲ್, ಕುಶಾಲನಗರ ತಾಲೂಕು ಅಧ್ಯಕ್ಷ ರವಿಕುಮಾರ್, ಪ್ರಮುಖರಾದ ಸೈಫುದ್ದೀನ್, ಡೆನ್ನಿ ಬೋರಸ್ ಸೇರಿದಂತೆ ಇತರರು ಉಪಸ್ಥಿತರಿದ್ದರು.