ಸುಂಟಿಕೊಪ್ಪ, ಆ. ೯: ೫ ಬಾರಿ ಶಾಸಕರಾಗಿ ಒಮ್ಮೆ ಸಚಿವರಾಗಿ ಕಾರ್ಯನಿರ್ವಹಿಸಿರುವ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ರಿಗೆ ಮಂತ್ರಿಸ್ಥಾನ ನೀಡಬೇಕು ಎಂದು ಸುಂಟಿಕೊಪ್ಪ ಬಿಜೆಪಿ ಸ್ಥಾನೀಯ ಸಮಿತಿ ಮುಖ್ಯ ಮಂತ್ರಿಗಳನ್ನು ಆಗ್ರಹಿಸಿದೆ.
ಕಳೆದ ೨೦೧೮ ರಿಂದ ಕೊಡಗಿನಲ್ಲಿ ಪ್ರವಾಹವಾಗಿ ಆಸ್ತಿಪಾಸ್ತಿ ಮನೆ ಕಳೆದುಕೊಂಡು ಸಂತ್ರಸ್ತರಾದವರಿಗೆ ಸಹಾಯಹಸ್ತ ನೀಡಿದ್ದಾರೆ. ಕೊರೊನಾ ಮಹಾಮಾರಿ ಸಂದರ್ಭ ಕೋವಿಡ್ ಕೇಂದ್ರಕ್ಕೆ ತೆರಳಿ ಸೋಂಕಿತರಿಗೆ ಅಭಯಹಸ್ತ ನೀಡಿದಲ್ಲದೆ ಕೋವಿಡ್ ಹೆಚ್ಚಾಗದಂತೆ ಜಿಲ್ಲಾಡಳಿತಕ್ಕೆ ಸಲಹೆ ಮಾರ್ಗದರ್ಶನ ನೀಡಿದ್ದಾರೆ.
ಜಾತಿ ಧರ್ಮ ಬೇಧವಿಲ್ಲದೆ ಸೇವೆ ಸಲ್ಲಿಸಿದ ಅವರಿಗೆ ಮಂತ್ರಿ ಸ್ಥಾನ ನೀಡಬೇಕೆಂದು ಸುಂಟಿಕೊಪ್ಪ ಶಕ್ತಿ ಕೇಂದ್ರಗಳ ಅಧ್ಯಕ್ಷರು ನಗರ ವಿವಿಧ ಮೋರ್ಚದ ಪದಾಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಬೆಂಬಲಿತ ಸದಸ್ಯರು ಮತ್ತು ಪ್ರಮುಖರು ಒತ್ತಾಯಿಸಿದ್ದು, ಈ ಬಗ್ಗೆ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಬಿ.ಕೆ. ಮೋಹನ್, ಶಕ್ತಿ ಕೇಂದ್ರದ ಪ್ರಮುಖ್ ಕೆ.ಕೆ. ವಾಸುದೇವ, ಬಿ.ಕೆ. ಪ್ರಶಾಂತ್ (ಕೋಕಾ), ಸಹಪ್ರಮುಖ್ ಟಿ. ಪ್ರಶಾಂತ್, ರಂಜಿತ್ ಪೂಜಾರಿ, ಯುವ ಮೋರ್ಚಾ ಅಧ್ಯಕ್ಷ ವಿಘ್ನೇಶ್, ನಗರ ಹಿಂದುಳಿದ ಅಧ್ಯಕ್ಷ ಸಿ.ಸಿ. ಸುನೀಲ್, ಸೋಮವಾರಪೇಟೆ ತಾಲೂಕು ಮಹಿಳಾ ಘಟಕದ ಸದಸ್ಯೆ ಲೀಲಾವತಿ ನಾಗರಾಜ್ ಇತರರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.