ಮಡಿಕೇರಿ, ಆ. ೧೦: ಕಾಂಗ್ರೆಸ್ ಮುಖಂಡರು ಹಾಗೂ ರಾಜ್ಯಸಭಾ ಸದಸ್ಯರೂ ಆಗಿರುವ ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯಕ್ಕಾಗಿ ಕಲ್ಲುಗುಂಡಿ ಮತ್ತು ಪೇರಡ್ಕದಲ್ಲಿ ಸರ್ವಧರ್ಮ ಪ್ರಾರ್ಥನೆ ನಡೆಯಿತು.
ಮುಹಿಯುದ್ದೀನ್ ಜುಮಾ ಮಸ್ಜಿದ್ ಪೇರಡ್ಕ ಇದರ ಗೌರವ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಮುಖಂಡರು ಆದ ಟಿ.ಎಂ.ಶಾಹಿದ್ ತೆಕ್ಕಿಲ್ ಅವರ ನೇತೃತ್ವದಲ್ಲಿ ಪೇರಡ್ಕ ವಲಿಯುಲ್ಲಾಹಿ ದರ್ಗಾ ಶರೀಫಿನಲ್ಲಿ ವಿಶೇಷ ದುವಾ ಪ್ರಾರ್ಥನೆ ಸಲ್ಲಿಸಲಾಯಿತು.