ಮಡಿಕೇರಿ, ಆ. ೧೧: ಜಿಲ್ಲೆಯಲ್ಲಿ ಬುಧವಾರ ೮೩ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿವೆ. ೬೮ ಆರ್‌ಟಿಪಿಸಿಆರ್ ಮತ್ತು ೧೫ ಪ್ರಕರಣಗಳು ರ‍್ಯಾಪಿಡ್ ಆ್ಯಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿವೆ.

ಮಡಿಕೇರಿ ತಾಲೂಕಿನಲ್ಲಿ ೧೭, ಸೋಮವಾರಪೇಟೆ ತಾಲೂಕಿನಲ್ಲಿ ೨೭, ವೀರಾಜಪೇಟೆ ತಾಲೂಕಿನಲ್ಲಿ ೩೯ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿವೆ. ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೩೨,೪೯೮ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೬೧ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೩೧,೪೮೭ ಮಂದಿ ಗುಣಮುಖರಾಗಿದ್ದಾರೆ. ೬೦೯ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೨ ಸಾವು ಉಂಟಾಗಿದ್ದು, ಒಟ್ಟು ೪೦೨ ಮರಣ ಪ್ರಕರಣಗಳು ವರದಿಯಾಗಿದೆ. ಕಂಟೈನ್‌ಮೆAಟ್ ವಲಯಗಳ ಸಂಖ್ಯೆ ೯೬ ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.೨.೫೪ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.