ಕೂಡಿಗೆ, ಆ. ೧೦: ಕೂಡಿಗೆ ಗ್ರಾ.ಪಂ. ವ್ಯಾಪ್ತಿಯ ಮಲ್ಲೇನಹಳ್ಳಿ ಗ್ರಾಮದ ಆಶ್ರಮ ಕಡೆಗಳ ಉಪ ಗ್ರಾಮಕ್ಕೆ ಹೋಗುವ ದಾರಿಯಲ್ಲಿ ಮಳೆಯ ನೀರು ರಸ್ತೆಯ ಮೇಲೆ ಹರಿದು ಸಾರ್ವಜನಿಕರಿಗೆ ಬಾರಿ ತೊಂದರೆ ಆಗುತ್ತಿದೆ ಎಂದು ಸಾರ್ವಜನಿಕರು ಶಾಸಕರಿಗೆ ದೂರನ್ನು ನೀಡಿದ್ದು, ಪೈಪ್‌ಲೈನ್ ಅಳವಡಿಕೆ ಕೆಲಸ ಆರಂಭವಾಗಿದೆ.

ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರ ಅನುದಾನ, ಒಂದೂವರೆ ಲಕ್ಷ ರೂ. ವೆಚ್ಚದಲ್ಲಿ ಬೃಹತ್ ಗಾತ್ರದ ಪೈಪ್‌ಗಳನ್ನು ಅಳವಡಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಗ್ರಾ.ಪಂ. ವ್ಯಾಪ್ತಿಯ ಹಳೆ ಕೂಡಿಗೆ ಮತ್ತು ಮಲ್ಲೇನಹಳ್ಳಿ ಗ್ರಾಮದಲ್ಲಿ ಶಾಸಕರ ಅನುದಾನ ರೂ. ಮೂರುವರೆ ಲಕ್ಷ ವೆಚ್ಚದಲ್ಲಿ ಕಾಂಕ್ರಿಟ್ ರಸ್ತೆಯ ಕಾಮಗಾರಿಯು ನಡೆಯುತ್ತಿದೆ.