ಕರಿಕೆ,ಆ:೧೧. ಕೊಡಗಿನ ಗಡಿ ಕರಿಕೆಯ ಚೆಂಬೇರಿಯಲ್ಲಿ ಕೋವಿಡ್ ತನಿಖಾ ಚೆಕ್ಪೋಸ್ಟ್ಗೆ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾಮಿಶ್ರಾ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೆ ಗಡಿಯಲ್ಲಿ ಜಿಲ್ಲಾಡಳಿತದ ವತಿಯಿಂದ ನೂತನವಾಗಿ ನಿರ್ಮಿಸುತ್ತಿರುವ ಕೋವಿಡ್ ತಪಾಸಣಾ ಕೇಂದ್ರದ ಸ್ಥಳ ಪರಿಶೀಲನೆ ನಡೆಸಿದರು. ತಹಶೀಲ್ದಾರ್ ಮಹೇಶ್ ಹಾಗೂ ಗ್ರಾಮಾಂತರ ಪೊಲೀಸ್ ಉಪ ನಿರೀಕ್ಷಕ ಸದಾಶಿವ ಅವರುಗಳು ಭೇಟಿ ನೀಡಿ ಪರಿಶೀಲನೆ ಮಾಡಿದರು.