ಕುಶಾಲನಗರ.ಆ.೧೧: ಶಾಸಕ ಅಪ್ಪಚ್ಚು ರಂಜನ್ ಅವರಿಗೆ ಸಚಿವ ಸಂಪುಟದಲ್ಲಿ ಅವಕಾಶ ಕಲ್ಪಿಸುವಂತೆ ಆಗ್ರಹಿಸಿ ಕುಶಾಲನಗರದ ವಿವಿಧ ಸಂಘಟನೆಗಳು ಮುಖ್ಯಮಂತ್ರಿಗಳಿಗೆ ಮನವಿ ಪತ್ರ ರವಾನಿಸಿದ್ದಾರೆ. ಕುಶಾಲನಗರ ಕೊಡವ ಸಮಾಜ, ಗೌಡ ಸಮಾಜ, ಆರ್ಯ ವೈಶ್ಯ ಸಮಾಜ, ಕುಶಾಲನಗರ ಪ್ರವಾಹ ಸಂತ್ರಸ್ತರ ವೇದಿಕೆ, ರಾಜಸ್ಥಾನ ಸಂಘ, ಚೇಂಬರ್ ಆಫ್ ಕಾಮರ್ಸ್, ನೇಕಾರರ ಸಂಘ, ವಾಲ್ಮೀಕಿ ಸಮಾಜದ ಪ್ರಮುಖರು ಮನವಿ ಸಲ್ಲಿಸಿದ್ದು, ಪತ್ರವನ್ನು ಬಿಜೆಪಿ ನಿಯೋಗದ ಮೂಲಕ ಮುಖ್ಯಮಂತ್ರಿಗೆ ಸಲ್ಲಿಸಿದ್ದಾರೆ.