ಕೂಡಿಗೆ/ಕುಶಾಲನಗರ, ಆ. ೧೧: ಪ್ರತಿಯೊಬ್ಬರೂ ಪರಿಸರ ಸಂಪನ್ಮೂಲಗಳನ್ನು ಉಳಿಸುವ ಮೂಲಕ ಪ್ರಕೃತಿ ಸಂರಕ್ಷಣೆಗೆ ಪಣ ತೊಡಬೇಕಿದೆ ಎಂದು ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಹಿರಿಯ ಉಪನ್ಯಾಸಕ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಸದಸ್ಯ ಕೆ.ವಿ. ಸುರೇಶ್ ಹೇಳಿದರು.
ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ, ರಾಷ್ಟಿçÃಯ ಹಸಿರು ಪಡೆ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಜಿಲ್ಲಾ ಘಟಕದ ಸಹಯೋಗದೊಂದಿಗೆ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಇಕೋ ಕ್ಲಬ್, ಎನ್.ಎಸ್.ಎಸ್. ಘಟಕ , ಎಸ್.ಡಿ.ಎಂ.ಸಿ. ಸಂಯುಕ್ತ ಆಶ್ರಯದಲ್ಲಿ ‘ನಮ್ಮ ನಡೆ ಹಸಿರೆಡೆಗೆ’ ಎಂಬ ಧ್ಯೇಯ ವಾಕ್ಯದಡಿ ಏರ್ಪಡಿಸಿದ್ದ ‘ವಿಶ್ವ ಪ್ರಕೃತಿ ಸಂರಕ್ಷಣಾ ದಿನದ ಸಂದರ್ಭ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಉತ್ತಮ ಆರೋಗ್ಯ ಹಾಗೂ ಮುಂದಿನ ಪೀಳಿಗೆಗೆ ಪರಿಸರವನ್ನು ಸಂರಕ್ಷಿಸುವುದು ಅವಶ್ಯಕ ಎಂದು ನುಡಿದರು. ವಿಶ್ವ ಪ್ರಕೃತಿ ಸಂರಕ್ಷಣಾ ದಿನದ ಮಹತ್ವ ವಿವರಿಸಿ ಪರಿಸರ ಪ್ರತಿಜ್ಞಾ ವಿಧಿ ಬೋಧಿಸಿದ ಶಾಲೆಯ ಮುಖ್ಯೋಪಾಧ್ಯಾಯ, ಜಿಲ್ಲಾ ಪರಿಸರ ಜಾಗೃತಿ ಆಂದೋಲನದ ಸಂಚಾಲಕ ಟಿ.ಜಿ. ಪ್ರೇಮಕುಮಾರ್ ಮಾತನಾಡಿ, ನೈಸರ್ಗಿಕ ಸಂಪನ್ಮೂಲಗಳನ್ನು ರಕ್ಷಿಸುವ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಪ್ರಕೃತಿಯ ಸಂರಕ್ಷಣೆಯ ಮಹತ್ವವನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ವಿಶ್ವ ಪ್ರಕೃತಿ ಸಂರಕ್ಷಣಾ ದಿನವನ್ನು ಆಚರಿಸಲಾಗುತ್ತದೆ ಎಂದರು.
ಡಯಟ್ ಉಪನ್ಯಾಸಕ ಕೆ.ಜಿ. ನೀಲಕಂಠಪ್ಪ ಮಾತನಾಡಿ, ಪ್ರಕೃತಿ, ಪರಿಸರ ಮತ್ತು ಶಕ್ತಿಯ ಸಂರಕ್ಷಣೆ ಹಾಗೂ ಬಳಕೆಯ ಬಗ್ಗೆ ಜನರಿಗೆ ಅರಿವು ಮೂಡಿಸಬೇಕಿದೆ ಎಂದರು. ಕೂಡಿಗೆ ಡಯಟ್ ಉಪನ್ಯಾಸಕಿ ಕೆ.ಎಸ್. ನಳಿನಾಕ್ಷಿ ಮಾತನಾಡಿ, ಪ್ರತಿಯೊಬ್ಬರೂ ಪರಿಸರವನ್ನು ಬುದ್ದಿವಂತಿಕೆಯಿAದ ಉಪಯೋಗಿಸಬೇಕಿದೆ ಎಂದರು. ಡಯಟ್ ಉಪನ್ಯಾಸಕ ವಿ. ವಿಜಯ್ ಮಾತನಾಡಿ, ನಾವು ಪರಿಸರದಲ್ಲಿ ಹೆಚ್ಚು ಗಿಡ-ಮರಗಳನ್ನು ನೆಟ್ಟು ಬೆಳೆಸುವ ಮೂಲಕ ಭೂಮಿಯನ್ನು ಹಸಿರು ಮಾಡುವ ಸಂಕಲ್ಪ ತೊಡಬೇಕಿದೆ ಎಂದರು. ತಾಲೂಕು ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಎಂ.ಟಿ. ದಯಾನಂದ ಪ್ರಕಾಶ್, ಇಕೋ ಕ್ಲಬ್ನ ಉಸ್ತುವಾರಿ ಶಿಕ್ಷಕಿ ಬಿ.ಡಿ. ರಮ್ಯ, ಎನ್.ಎಸ್.ಎಸ್. ಘಟಕದ ಸಂಚಾಲಕ ಡಿ. ರಮೇಶ್, ಶಿಕ್ಷಕ ಗೋಪಾಲಕೃಷ್ಣ, ಶಿಕ್ಷಕರು, ಹಿರಿಯ ವಿದ್ಯಾರ್ಥಿಗಳು ಇದ್ದರು.
ಶಿಕ್ಷಕಿ ಪಿ. ಅನಿತಾಕುಮಾರಿ ಸ್ವಾಗತಿಸಿದರು. ಶಿಕ್ಷಕಿ ಅನ್ಸಿಲಾ ರೇಖಾ ವಂದಿಸಿದರು.
ಕುಶಾಲನಗರ ಹಸಿರೀಕರಣಕ್ಕೆ ಯೋಜನೆ: ಜಯವರ್ಧನ್
ಕುಶಾಲನಗರ ಪಟ್ಟಣವನ್ನು ಹಸಿರೀಕರಣ ಮಾಡುವ ನಿಟ್ಟಿನಲ್ಲಿ ಪಂಚಾಯಿತಿ ಮೂಲಕ ಹಲವು ಯೋಜನೆ ರೂಪಿಸಲಾಗಿದೆ ಎಂದು ಕುಶಾಲನಗರ ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಯವರ್ಧನ್ ತಿಳಿಸಿದ್ದಾರೆ. ಕುಶಾಲನಗರ ಆರ್ಎಂಸಿ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಆಶ್ರಯದಲ್ಲಿ ಕಾವೇರಿ ಪರಿಸರ ರಕ್ಷಣಾ ಬಳಗದ ಸಹಯೋಗದೊಂದಿಗೆ ನಡೆದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಜಯವರ್ಧನ್, ಪಂಚಾಯಿತಿಯ ಪ್ರತಿಯೊಬ್ಬ ಸದಸ್ಯರು ತಲಾ ೫೦ ಗಿಡಗಳನ್ನು ತಮ್ಮ ವಾರ್ಡ್ನಲ್ಲಿ ನೆಟ್ಟು ನಿರ್ವಹಣೆ ಮಾಡುವ ಯೋಜನೆ ಚಾಲನೆಗೊಳ್ಳಲಿದೆ ಎಂದು ತಿಳಿಸಿದರು.
ಈ ಮೂಲಕ ಪ್ರತೀ ವಾರ್ಡ್ಗಳ ಹಸಿರೀಕರಣ ನಡೆಯಲಿದೆ ಎಂದ ಅವರು, ಸ್ವಚ್ಛ ಕಾವೇರಿಗಾಗಿ ಪಂಚಾಯಿತಿ ಬಜೆಟ್ನಲ್ಲಿ ಅನುದಾನ ಮೀಸಲಿರಿಸಲಾಗಿದೆ ಎಂದು ಮಾಹಿತಿ ನೀಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಜಯಂತಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಆರ್ಎಂಸಿ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು. ಈ ಸಂದರ್ಭ ಪಂಚಾಯಿತಿ ಸದಸ್ಯ ಅಮೃತ್ರಾಜ್, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಮೇಲ್ವಿಚಾರಕಿ ಸುಲೇಖ, ಸಂಘಟನೆಗಳ ಪ್ರಮುಖ ದೀಪಕ್ ಎಂ. ಕೃಷ್ಣ, ರೋಟರಿ ಅಧ್ಯಕ್ಷ ಎಂ.ಡಿ. ರಂಗಸ್ವಾಮಿ, ಲಯನ್ಸ್ ಕ್ಲಬ್ ಕಾರ್ಯದರ್ಶಿ ಸುಮನ್, ಆರ್ಎಂಸಿ ಅಧ್ಯಕ್ಷ ಎಂ.ಡಿ. ರಮೇಶ್, ನಿರ್ದೇಶಕರಾದ ಭೀಮಯ್ಯ, ಬೋಸ್ ಮೊಣ್ಣಪ್ಪ, ಕಾವೇರಿ ಪರಿಸರ ರಕ್ಷಣಾ ಬಳಗದ ಸಂಚಾಲಕ ಎಂ.ಎನ್. ಚಂದ್ರಮೋಹನ್, ಸೇವಾ ಪ್ರತಿನಿಧಿಗಳು, ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಇದ್ದರು.