ಮ.ಆ.೧೦; ಕೊಡಗು ಜಿಲ್ಲೆಯ ಶಾಸಕರುಗಳಿಗೆ ಸಚಿವ ಸ್ಥಾನ ನೀಡಬೇಕೆಂದು ಕೊಡಗು ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಆಗ್ರಹಿಸಿದೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅಸೋಸಿಯೇಷನ್ ಅಧ್ಯಕ್ಷ ಹೆಚ್.ಎಸ್.ಉತ್ತಪ್ಪ ಹಾಗೂ ಪ್ರಧಾನ ಕಾರ್ಯದರ್ಶಿ ಬಿ.ಡಿ.ಕಪಿಲ್ಕುಮಾರ್ ಅವರುಗಳು, ಸಚಿವ ಸ್ಥಾನ ಹಂಚಿಕೆ ಸಂದರ್ಭ ಕೊಡಗು ಜಿಲ್ಲೆಯನ್ನು ಕಡೆಗಣಿಸಲಾಗಿದೆ. ಜಿಲ್ಲೆಯ ಶಾಸಕರುಗಳಾದ ಕೆ.ಜಿ.ಬೋಪಯ್ಯ ನಾಲ್ಕು ಬಾರಿ ಹಾಗೂ ಅಪ್ಪಚ್ಚು ರಂಜನ್ ೫ಬಾರಿ ಆಯ್ಕೆಯಾಗಿ ಅನುಭವ ಉಳ್ಳವರಾಗಿದ್ದಾರೆ. ಹಾಗಾಗಿ ಈರ್ವರಲ್ಲಿ ಓರ್ವರಿಗೆ ಸಚಿವ ಸ್ಥಾನ ನೀಡಬೇಕು. ಈ ಸಂಬAಧ ಮುಖ್ಯಮಮತ್ರಿಗಳು ಹಾಗೂ ಜಿಲ್ಲಾ ಬಿಜೆಪಿ ಅಧ್ಯಕ್ಷರಿಗೆ ಮನವಿ ಸಲ್ಲಿಸಲಾಗುವದೆಂದು ತಿಳಿಸಿದ್ದಾರೆ.