ಸೋಮವಾರಪೇಟೆ, ಆ. ೧೧: ಜಿಲ್ಲಾಡಳಿತ, ಜಿ.ಪಂ. ಹಾಗೂ ಕೃಷಿ ಇಲಾಖೆಯ ವತಿಯಿಂದ, ಕೃಷಿ ಹಾಗೂ ಕೃಷಿ ಸಂಬAಧಿತ ಇತರ ಇಲಾಖೆಗಳ ಸಹಯೋಗದೊಂದಿಗೆ ಅನುಷ್ಠಾನಕ್ಕೆ ತಂದಿರುವ ಸಮಗ್ರ ಕೃಷಿ ಅಭಿಯಾನ-ಕೋವಿಡ್ ಕುರಿತ ಮಾಹಿತಿ ಕಾರ್ಯಕ್ರಮಕ್ಕೆ ಶಾಸಕ ಅಪ್ಪಚ್ಚು ರಂಜನ್ ಚಾಲನೆ ನೀಡಿದರು. ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ ಎಂಬ ಧ್ಯೇಯ ವಾಕ್ಯದೊಂದಿಗೆ ಅಭಿಯಾನವನ್ನು ಆರಂಭಿಸಲಾಗಿದ್ದು, ಕೃಷಿ ಸಂಬAಧಿತ ಎಲ್ಲಾ ಯೋಜನೆಗಳ ಬಗ್ಗೆ ಸಮಗ್ರ ಮಾಹಿತಿ ನೀಡುವ ಮೂಲಕ ಕೃಷಿಕರಿಗೆ ಸರ್ಕಾರಿ ಸವಲತ್ತು ಒದಗಿಸಲಾಗುವುದು ಎಂದು ರಂಜನ್ ತಿಳಿಸಿದರು.

ರಾಜ್ಯ ಸರ್ಕಾರ ರೈತರ ಸುಧಾರಣೆಗೆ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಈ ಹಿಂದೆ ಜಿಲ್ಲೆಯ ರೈತರು ಟಾರ್ಪಲ್‌ಗಳ ಬೇಡಿಕೆ ಇರಿಸಿದ ಹಿನ್ನೆಲೆ ಕೃಷಿ ಸಚಿವರಿಗೆ ಪತ್ರ ಬರೆದು ೧೦ ಸಾವಿರ ಟಾರ್ಪಲ್ ನೀಡುವಂತೆ ಮನವಿ ಮಾಡಲಾಗಿತ್ತು. ಇದಕ್ಕೆ ಪೂರಕವಾಗಿ ಜಿಲ್ಲೆಗೆ ೫ಸಾವಿರ ಟಾರ್ಪಲ್ ಬಂದಿದ್ದು, ರೈತರಿಗೆ ವಿತರಿಸಲಾಗುತ್ತಿದೆ ಎಂದರು.

೨೦೧೮ರಿAದಲೂ ಹವಾಮಾನ ವೈಪರೀತ್ಯದಿಂದಾಗಿ ರೈತರು ಸಂಕಷ್ಟದಲ್ಲಿ ಇದ್ದಾರೆ. ಸರ್ಕಾರ ಕೃಷಿ ಇಲಾಖೆಯ ಮೂಲಕ ಕೃಷಿ ಯಾಂತ್ರೀಕರಣ ಯೋಜನೆಯಡಿಯಲ್ಲಿ ಯಂತ್ರಗಳ ಖರೀದಿಗೆ ಸಹಾಯಧನದ ಯೋಜನೆಯಲ್ಲಿ ಹಣ ನೀಡುತ್ತಿದೆ. ಲಘು ನೀರಾವರಿ ಯೋಜನೆ, ಬೆಳೆ ವಿಮೆ ಸೇರಿದಂತೆ ಹಲವು ಯೋಜನೆಗಳಿದ್ದು, ರೈತರು ಇವುಗಳ ಪ್ರಯೋಜನ ಪಡೆಯಬೇಕೆಂದು ಸಲಹೆ ನೀಡಿದರು. ಈ ಸಂದರ್ಭ ಜಿ.ಪಂ. ಮಾಜಿ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ತಾ.ಪಂ. ಮಾಜಿ ಉಪಾಧ್ಯಕ್ಷ ಅಭಿಮನ್ಯು ಕುಮಾರ್, ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಎಸ್.ಪಿ. ಪೊನ್ನಪ್ಪ, ತಹಶೀಲ್ದಾರ್ ಗೋವಿಂದರಾಜು, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಯಾದವ್ ಬಾಬು, ಪ.ಪಂ. ಸದಸ್ಯ ಶುಭಕರ್, ಮಹೇಶ್, ಪಿ.ಕೆ. ಚಂದ್ರು ಸೇರಿದಂತೆ ಇತರರು ಪಾಲ್ಗೊಂಡಿದ್ದರು.