ಸೋಮವಾರಪ್ಭೆಟೆ,ಆ.೧೧: ದೀನ್ ದಯಾಳ್ ಅಂತ್ಯೋದಯ ಯೋಜನೆ ಹಾಗೂ ರಾಷ್ಟಿçÃಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿರುವ ೧೮ ರಿಂದ ೩೫ವರ್ಷ ವಯಸ್ಸಿನೊಳಗಿನ ನಿರುದ್ಯೋಗಿ ಯುವಕ/ಯುವತಿಯರಿಗೆ ಸ್ವಯಂ ಉದ್ಯೋಗ ಯೋಜನೆಯಡಿ ವಿವಿಧ ಸಾಲ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಈಗಾಗಲೇ ಪಟ್ಟಣ ಪಂಚಾಯಿತಿ ಕಛೇರಿಯಿಂದ ರಚಿತಗೊಂಡ ಉಳಿತಾಯ ಗುಂಪುಗಳಿಗೆ ಬ್ಯಾಂಕಿನಿAದ ಸಾಲ ಸೌಲಭ್ಯ ಹಾಗೂ ಹೊಸದಾಗಿ ಮಹಿಳಾ ಉಳಿತಾಯ ಗುಂಪು ರಚನೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿಯೊಂದಿಗೆ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ ಮತ್ತು ಭಾವಚಿತ್ರದೊಂದಿಗೆ ನೀಡಬೇಕು. ಹೆಚ್ಚಿನ ಮಾಹಿತಿಗೆ ಪಟ್ಟಣ ಪಂಚಾಯಿತಿ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ.
ಸAಕಲ್ಪ ಸಿದ್ದಿ ವಿಶೇಷ ಸಾಲ ಯೋಜನೆ: ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಲಾಕ್ಡೌನ್ನಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಬೀದಿ ಬದಿ ವ್ಯಾಪಾರಸ್ಥರಿಗೆ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆತ್ಮನಿರ್ಭರ್ ಯೋಜನೆಯಡಿ “ಸಂಕಲ್ಪ ಸಿದ್ಧಿ” ವಿಶೇಷ ಸಾಲದ ಯೋಜನೆಯಡಿ ೨೦೨೧ರ ಜುಲೈ ೧ ರಿಂದ ಆಗಸ್ಟ್ ೧೫ರ ವರೆಗೆ ೨ನೇ ಬಾರಿಗೆ ಸಾಲ ಸೌಲಭ್ಯ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈಗಾಗಲೇ ೧೦ ಸಾವಿರ ರೂ. ಸಾಲ ಪಡೆದು ಪೂರ್ಣ ಪ್ರಮಾಣದಲ್ಲಿ ಮರುಪಾವತಿ ಮಾಡಿದ ವ್ಯಾಪಾರಿಗಳಿಗೆ ೨ನೇ ಬಾರಿಗೆ ರೂ. ೨೦ ಸಾವಿರ ನೀಡಲಾಗುವುದು, ಅರ್ಹ ಅರ್ಜಿದಾರರು ನಿಗದಿತ ಅವಧಿಯಲ್ಲಿ ಮೊದಲನೆ ಸಾಲ ಮರುಪಾವತಿ ಮಾಡಿರುವ ಬಗ್ಗೆ ಬ್ಯಾಂಕಿನಿAದ ಪ್ರಮಾಣ ಪತ್ರ ಪಡೆದು ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಮುಖ್ಯಾಧಿಕಾರಿ ನಾಚಪ್ಪ ತಿಳಿಸಿದ್ದಾರೆ