ಕೂಡಿಗೆ, ಆ. ೧೧: ತಾಲೂಕು ಕೃಷಿ ಇಲಾಖೆ ವತಿಯಿಂದ ಕೃಷಿ ಅಭಿಯಾನ ಕಾರ್ಯಕ್ರಮ ತಾ. ೧೨ ರಂದು (ಇಂದು) ನಡೆಯಲಿದೆ.
ಕೃಷಿ ಇಲಾಖೆಯ ಮೂಲಕ ಕಳೆದ ಎರಡು ವರ್ಷದ ಹಿಂದೆ ಆಯಾ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೃಷಿ ಅಭಿಯಾನ ಕಾರ್ಯಕ್ರಮ ನಡೆಸಿ ಯೋಜನೆಯ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿತ್ತು. ಆದರೆ ಕೋವಿಡ್ ಹಿನ್ನೆಲೆ ಈ ಸಾಲಿನಲ್ಲಿ ಕೃಷಿ ಅಭಿಯಾನಕ್ಕೆ ಒಂದು ವಾಹನವನ್ನು ಸಿದ್ಧಪಡಿಸಿ ಅದರ ಮೂಲಕ ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಾಗೃತಿ ಮೂಡಿಸಲಾಗುವುದು. ಶಿರಂಗಾಲ, ತೊರೆನೂರು, ಹೆಬ್ಬಾಲೆ, ಕೂಡಿಗೆ ವ್ಯಾಪ್ತಿಯಲ್ಲಿ ಕೃಷಿ ಅಭಿಯಾನ ಕಾರ್ಯಕ್ರಮ ನಡೆಯಲಿದೆ ಎಂದು ಕುಶಾಲನಗರದ ರೈತ ಸಂಪರ್ಕ ಕೇಂದ್ರದ ಅಧಿಕಾರಿ ಅರುಣ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ