ಕೂಡಿಗೆ, ಆ. ೧೧: ಕೂಡಿಗೆ ಗ್ರಾಮ ಪಂಚಾಯಿತಿಯ ಮಾಸಿಕ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳಾ ಪ್ರಕಾಶ್ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಬ್ಯಾಡಗೊಟ್ಟ ಗ್ರಾಮದಲ್ಲಿ ಈಗಾಗಲೇ ಉದ್ದೇಶಿಸಿರುವ ಒಣ ಕಸ ವಿಲೇವಾರಿ ಘಟಕ ಕಾಮಗಾರಿಯನ್ನು ಪೂರ್ಣ ಗೊಳಿಸುವಂತೆ ಸಭೆಯಲ್ಲಿ ಹಾಜರಿದ್ದ ಸರ್ವ ಸದ್ಯಸರು ಒಮ್ಮತದ ತೀರ್ಮಾನ ತೆಗೆದುಕೊಂಡರು.

ಹಾಲಿ ವಾಸಿಸುವ ಬ್ಯಾಡಗೊಟ್ಟ ಗ್ರಾಮಸ್ಥರಿಗೆ ಯಾವುದೇ ರೀತಿಯ ತೊಂದರೆಗಳು ಆಗದಂತೆ ಹೊಸ ಮಾದರಿಯ ಒಣ ಕಸ ಮತ್ತು ಪ್ಲಾಸ್ಟಿಕ್‌ಗಳ ಬೇರ್ಪಡಿಸುವ ನೂತನ ಯಂತ್ರಗಳನ್ನು ಅಳವಡಿಕೆ ಮಾಡುವ ಬಗ್ಗೆ ಚರ್ಚೆಗಳು ನಡೆದವು.

ನಂತರ ೧೫ ಹಣಕಾಸು ಯೋಜನೆಗೆ ಸಂಬAಧಿಸಿದAತೆ ಕ್ರಿಯಾ ಯೋಜನೆ ಅನುಗುಣವಾಗಿ ಆಯಾ ವಾರ್ಡ್ಗಳಲ್ಲಿ ಕಾಮಗಾರಿ ಯನ್ನು ನಡೆಸುವುದರ ಬಗ್ಗೆ ಹಾಜರಿದ್ದ ಸದಸ್ಯರು ತಮ್ಮ ಅಭಿಪ್ರಾಯಗಳನ್ನು ತಿಳಿಸಿದರು.

ರಾಷ್ಟಿçÃಯ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಕೈಗೊಳ್ಳುವ ಕಾಮಗಾರಿಗಳ ಪಟ್ಟಿಯ ಆಧಾರದ ಮೇಲೆ ಕಾಮಗಾರಿಗಳನ್ನು ಪ್ರಾರಂಭ ಮಾಡುವುದು ವಿಷಯ ಕುರಿತು ಚರ್ಚೆಗಳು ನಡೆದವು.

ಸಭೆಯಲ್ಲಿ ಮಳೆಗಾಲ ಮುನ್ನೆಚ್ಚರಿಕೆ ಕ್ರಮ. ಅದಕ್ಕೆ ಬೇಕಾಗುವ ಎಲ್ಲಾ ರೀತಿಯ ಸಿದ್ಧತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಗ್ಗು ಪ್ರದೇಶದ ಜನರಿಗೆ ಸೌಲಭ್ಯಗಳನ್ನು ಒದಗಿಸುವ ಕುರಿತು ಸದಸ್ಯರುಗಳಾದ ಟಿ.ಪಿ. ಹಮೀದ್, ಅರುಣರಾವ್, ಗಿರೀಶ್ ಕ್ರಮ ವಹಿಸುವಂತೆ ನಿರ್ದೇಶಿಸಿದರು. ಅಲ್ಲದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಲಭೂತ ಸೌಕರ್ಯಗಳ ಬಗ್ಗೆ ಮತ್ತು ವಿದ್ಯುತ್ ದೀಪಗಳ ದುರಸ್ತಿ ವಿಷಯದ ಬಗ್ಗೆ ಚರ್ಚೆಗಳು ನಡೆದವು.

ಸಭೆಯಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಂ.ಕೆ. ಅಯಿಷಾ ಸಭೆಗೆ ಸಾರ್ವಜನಿಕರ ಅರ್ಜಿಗಳ ಬಗ್ಗೆ ಮಾಹಿತಿಯನ್ನು ತಿಳಿಸಿದರು. ಗ್ರಾಮ ಪಂಚಾಯಿತಿ ಅನುದಾನದ ಶೇ. ೨೫ರ ಅನುದಾನದಲ್ಲಿ ಬ್ಯಾಡಗೊಟ್ಟ ಗ್ರಾಮದಲ್ಲಿ ಅನಾರೋಗ್ಯದಿಂದ ಸಾವನ್ನಪ್ಪಿದ್ದ ಇಬ್ಬರಿಗೆ ಸಹಾಯ ಧನದ ಚೆಕ್ ಅನ್ನು ವಿತರಣೆ ಮಾಡಲಾಯಿತು.

ಸಭೆಯಲ್ಲಿ ಉಪಾಧ್ಯಕ್ಷೆ ಮೋಹಿನಿ ತಮ್ಮಣೆಗೌಡ ಸದಸ್ಯರುಗಳಾದ ಟಿ.ಪಿ. ಹಮೀದ್ ಶಿವಕುಮಾರ್ ಗಿರೀಶ್ ಅರುಣ ರಾವ್ ಚಂದ್ರು ಸೇರಿದಂತೆ ಸದಸ್ಯರು, ಕಾರ್ಯದರ್ಶಿ ಶಿಲ್ಪಾ ಹಾಜರಿದ್ದರು.