ಮಡಿಕೇರಿ, ಆ. ೧೧: ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯೂತ್ ಹಾಸ್ಟೆಲ್ ಅಸೋಸಿಯೇಶನ್ ಆಫ್ ಇಂಡಿಯಾ (ಮಡಿಕೇರಿ ಘಟಕ), ಕೊಡಗು ಜಿಲ್ಲಾ ಯುವ ಒಕ್ಕೂಟ, ವೀರಾಜಪೇಟೆ ಮತ್ತು ಸೋಮವಾರಪೇಟೆ ತಾಲೂಕು ಯುವ ಒಕ್ಕೂಟ ಇವರ ಸಂಯುಕ್ತ ಆಶ್ರಯದಲ್ಲಿ ತಾ. ೧೪ ರಂದು ಮಡಿಕೇರಿ ತಾಲೂಕಿನ ಕಗ್ಗೋಡ್ಲು ಗ್ರಾಮದ ದಿ. ಸಿ.ಡಿ. ಬೋಪಯ್ಯ ಅವರ ಗದ್ದೆಯಲ್ಲಿ ನಡೆಯಬೇಕಿದ್ದ್ದ ರಾಜ್ಯಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ ಮತ್ತು ಆಟೋಟ ಸ್ಪರ್ಧೆಗಳನ್ನು ಮುಂದೂಡಲಾಗಿದೆ.
ಮುಂದಿನ ದಿನಾಂಕವನ್ನು ಸರ್ಕಾರದ ನಿಯಮಾನುಸಾರ ತಿಳಿಸಲಾಗುವುದು. ಎಲ್ಲಾ ಕ್ರೀಡಾಪಟುಗಳು, ಕ್ರೀಡಾಭಿಮಾನಿಗಳು ಸಹಕರಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಸ್ವಾಮಿ ತಿಳಿಸಿದ್ದಾರೆ.