ಮಡಿಕೇರಿ, ಆ.೧೧ : ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸಂಸ್ಥೆ ವತಿಯಿಂದ ಡಿ.ಎಸ್ಟಿ-ಪಿಎಚ್ಡಿ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು (ಡಿಎಸ್ಟಿ) ೨೦೧೮-೧೯ ನೇ ಸಾಲಿನಿಂದ “ಕರ್ನಾಟಕ ಡಿ.ಎಸ್.ಟಿ-ಪಿಎಚ್ಡಿ ಶಿಷ್ಯವೇತನ” ಅಡಿಯಲ್ಲಿ ೨೦೨೧-೨೨ ನೇ ಸಾಲಿನಲ್ಲಿ ಶಿಷ್ಯವೇತನ ಪಡೆಯಲು ವಿಜ್ಞಾನ ಮತ್ತು ಇಂಜಿನಿಯರಿAಗ್ ವಿಷಯಗಳಲ್ಲಿ ಕರ್ನಾಟಕದಲ್ಲಿರುವ ಮಾನ್ಯತೆ ಪಡೆದ ವಿಶ್ವವಿದ್ಯಾಲಯ, ಸಂಸ್ಥೆ, ಕಾಲೇಜುಗಳಲ್ಲಿ ಈಗಾಗಲೇ ನೋಂದಾಯಿತರಾಗಿರುವ ಅರ್ಹ ಸಂಶೋಧನಾ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಗತ್ಯ ದಾಖಲೆಗಳೊಂದಿಗೆ ಸೆಪ್ಟೆಂಬರ್, ೬ ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗೆ ಮತ್ತು ಅರ್ಜಿ ಸಲ್ಲಿಸಲು hಣಣಠಿ://ಞsಣeಠಿs.ಞಚಿಡಿಟಿಚಿಣಚಿಞಚಿ.gov.iಟಿ ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯ ನಿರ್ದೇಶಕರು(ತಾಂತ್ರಿಕ), ವಿತಂಇ/ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.