ಮಡಿಕೇರಿ, ಆ.೧೨: ಜಿಲ್ಲೆಯ ಗಡಿ ಭಾಗ ಆನೆಚೌಕೂರು ಚೆಕ್ಪೋಸ್ಟ್ಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಉಪ ವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಂಡು, ತಹಶೀಲ್ದಾರ್ ಮಹೇಶ್ ಇತರರು ಗುರುವಾರ ಭೇಟಿ ನೀಡಿ ಪರಿಶೀಲಿಸಿದರು.
ಕೇರಳದಿಂದ ಕೊಡಗಿಗೆ ಬರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಜಿಲ್ಲಾ ಗಡಿ ಪ್ರದೇಶಗಳಲ್ಲಿ ಕೋವಿಡ್ ಪರೀಕ್ಷೆ ವಾಹನ ತಪಾಸಣೆಗಳು, ಕಟ್ಟುನಿಟ್ಟಿನ ಕೋವಿಡ್ ನಿಯಮ ಪಾಲನೆಯ ಬಗ್ಗೆ ಮಾಹಿತಿ ಪಡೆದರು.