ಮಡಿಕೇರಿ, ಆ. ೧೨: ಪ್ರಸಕ್ತ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೊಮಾ ಕೋರ್ಸ್ ಕಲಿಕೆಗಾಗಿ ಒಟ್ಟು ೪೪ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವ್ಯಾಸಂಗದ ಸಮಯದಲ್ಲಿ ಮಾರ್ಗ ಸೂಚಿಯ ಪ್ರಕಾರ ಪ್ರತಿ ವಿದ್ಯಾರ್ಥಿ ಗಳಿಗೆ ಪ್ರತಿ ತಿಂಗಳು ರೂ. ೧೦೦೦ ರಿಂದ ೧೨೦೦ ವರೆಗೆ ಶಿಷ್ಯ ವೇತನ ನೀಡಲಾಗುವುದು ಹಾಗೂ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು.
ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣ ರಾಗಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ೨೦೨೧ ರ ಜುಲೈ, ೧ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು ೧೫ ರಿಂದ ೨೩ರ ವಯೋಮಿತಿಯಲ್ಲಿರಬೇಕು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ೧೫ ರಿಂದ ೨೫ರ ವಯೋಮಿತಿಯಲ್ಲಿರಬೇಕು. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೋಢೀಕೃತ ಅಂಕಗಳು ಮೆರಿಟ್ ಲೆಕ್ಕಾಚಾರಕ್ಕೆ ಆಧಾರವಾಗಿವೆ.
ಡಿಪ್ಲೊಮಾ ಕೋರ್ಸಿಗೆ ಲಭ್ಯವಿರುವ ಸಂಸ್ಥೆಗಳ ವಿವರ: ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಗದಗ-ಬೆಟಗೇರಿ (ಕರ್ನಾಟಕ)-೨೨ ಅಭ್ಯರ್ಥಿಗಳು, ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಸೇಲಂ (ತಮಿಳುನಾಡು)-೧೭ ಅಭ್ಯರ್ಥಿಗಳು, ಎಸ್ಪಿಕೆಎಂ ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ವೆಂಕಟಗಿರಿ ೩ ಅಭ್ಯರ್ಥಿಗಳು (ನೆಲ್ಲೂರು ಜಿಲ್ಲೆ, ಆಂಧ್ರಪ್ರದೇಶ). ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಕಣ್ಣೂರು (ಕೇರಳ) ೨ ಅಭ್ಯರ್ಥಿಗಳು. ಒಟ್ಟು ೪೪ ಅಭ್ಯರ್ಥಿಗಳು. ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾಯ ಡಿಪ್ಲೊಮಾ ಸಂಸ್ಥೆಗಳಲ್ಲಿ ಕೋರ್ಸ್ ಪ್ರವೇಶ ಕುರಿತಂತೆ ಕೌನ್ಸೆಲಿಂಗ್ ಆಹ್ವಾನಿಸಲಾಗುವುದು. ಆಸಕ್ತಿ ಇರುವ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಗದಗ-ಬೆಟಗೇರಿ (ಕರ್ನಾಟಕ) ದೂರವಾಣಿ ಸಂಖ್ಯೆ:೦೮೩೭೨-೨೯೭೨೨೧ ಅಥವಾ ಸಹಾಯಕ ನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಕಟ್ಟಡ (ಡಿಐಸಿ), ಕೊಹಿನೂರು ರಸ್ತೆ, ಮಡಿಕೇರಿ ದೂರವಾಣಿ ಸಂಖ್ಯೆ: ೦೮೨೭೨-೨೨೦೩೬೫ ಇವರುಗಳನ್ನು ಸಂಪರ್ಕಿಸಬಹುದಾಗಿದೆ. ಪೂರ್ಣವಾಗಿ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿ ಗಳೊಂದಿಗೆ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರ್ಸಾಪುರ, ಗದಗ-ಬೆಟಗೇರಿ - ೫೦೨೧೦೨ ಇವರಿಗೆ ಸಲ್ಲಿಸಲು ತಾ. ೧೬ ಕೊನೆಯ ದಿನವಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕ ಗುರುಸ್ವಾಮಿ ತಿಳಿಸಿದ್ದಾರೆ.