*ಗೋಣಿಕೊಪ್ಪ, ಆ. ೧೨: ಹಾತೂರು ಪಂಚಾಯಿತಿ ವ್ಯಾಪ್ತಿಯ ಕೈಕೇರಿ-ಕಳತ್ಮಾಡು ಗ್ರಾಮದಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆಯಿಂದ ಸಮೀಪದ ಮನೆಗಳ ಗೋಡೆಗಳು ಬಿರುಕು ಬಿಟ್ಟು ಆತಂಕವನ್ನು ಸೃಷ್ಟಿಸುತ್ತಿದೆ ಎಂದು ಸ್ಥಳೀಯ ಗ್ರಾಮಸ್ಥರು ದೂರಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಗ್ರಾಮಸ್ಥರು ಕಳತ್ಮಾಡು ಗೊಟ್ಟಡ ಅಯ್ಯಪ್ಪ ದೇವಸ್ಥಾನದಿಂದ ೨೦೦ ಮೀ. ಒಳಗಡೆ ಗಣಿಗಾರಿಕೆ ನಡೆಯುತ್ತಿದೆ. ಇದರಿಂದಾಗಿ ಸಮೀಪದಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ಹಾನಿ ಉಂಟಾಗುವುದಲ್ಲದೇ ಕೃಷಿ ಚಟುವಟಿಕೆಗೂ ಸಮಸ್ಯೆ ತಲೆದೋರಿದೆ. ಇದರಿಂದ ಈ ಪ್ರದೇಶದಲ್ಲಿ ವಾಸಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದ್ದು, ಅಪಾಯದ ಸೂಚನೆಯಲ್ಲೇ ಜೀವನ ನಡೆಸುವ ಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

ಗಣಿಗಾರಿಕೆ ಪ್ರದೇಶದಲ್ಲಿ ಸಿಡಿಮದ್ದಿನ ಬಳಕೆಯಿಂದ ಭೂಕುಸಿತ ಉಂಟಾಗುತ್ತಿದ್ದು, ಸ್ಥಳೀಯ ಮನೆಗಳ ಗೋಡೆಗಳು ಬಿರುಕು ಬಿಡುತ್ತಿದೆ. ಇದರಿಂದ ಬಹುನಷ್ಟವನ್ನು ಸ್ಥಳೀಯರು ಅನುಭವಿಸುತ್ತಿದ್ದಾರೆ.

(ಮೊದಲ ಪುಟದಿಂದ) ಗಣಿಗಾರಿಕೆಯನ್ನು ನಿಲ್ಲಿಸುವಂತೆ ಸಂಬAಧಿಸಿದವರಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನ ಕಂಡುಬAದಿಲ್ಲ ಎಂದು ಸ್ಥಳೀಯ ನಿವಾಸಿಗಳು ಎದುರಾಗಿರುವ ಸಂಕಷ್ಟವನ್ನು ತಿಳಿಸಿದ್ದಾರೆ. ಈ ಕಾರಣದಿಂದ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಕ್ರಮ ಗಣಿಗಾರಿಕಾ ಸ್ಥಳವನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಸಮಸ್ಯೆಯನ್ನು ಬಗೆಹರಿಸುವಂತೆ ಜಿಲ್ಲಾಧಿಕಾರಿಗಳು ಹಾಗೂ ತಾಲೂಕು ದಂಡಾಧಿಕಾರಿಗಳಿಗೆ ಮನವಿ ಪತ್ರವನ್ನು ನೀಡಲಾಗಿದೆ ಎಂದು ಇದೀಗ ಗ್ರಾಮಸ್ಥರು ತಿಳಿಸಿದ್ದಾರೆ.